ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಹಳೆ ನೇತ್ರಾವತಿ ನದಿಯಲ್ಲಿ ಬುಧವಾರ ಯುವಕನ ಶವ ಪತ್ತೆಯಾಗಿದೆ. ಮೃತದೇಹದಲ್ಲಿ ದೊರೆತ ಚಾಲನಾ ಪರವಾನಿಗೆ ಹಾಗೂ ಇತರ ದಾಖಲೆಗಳ ಆಧಾರದಲ್ಲಿ ಬೆಂಗಳೂರು-ಪೀಣ್ಯ ನಿವಾಸಿ ಮುನಿಯಪ್ಪ ಎಂಬವರ ಪುತ್ರ ಶ್ರೀನಿವಾಸ ಎಂ (32) ಎಂದು ಹೇಳಲಾಗಿದೆ.
ಬುಧವಾರ ಬೆಳಿಗ್ಗೆ ಅಕ್ಕರಂಗಡಿ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ನೋಡಿದ ಅಕ್ಕರಂಗಡಿ ನಿವಾಸಿ ಮುಖ್ತಾರ್ ಹಾಗೂ ಸ್ನೇಹಿತರು ಶವವನ್ನು ಎಳೆದು ದಡಕ್ಕೆ ತಂದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಶವಾಗಾರಕ್ಕೆ ಸಾಗಿಸಲಾಗಿದ್ದು, ಇಲ್ಲಿನ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತ ವ್ಯಕ್ತಿಯ ಸಂಬಂಧಿಕರಾಗಿ ಪತ್ತೆ ಕಾರ್ಯ ಆರಂಭಿಸಿದ್ದಾರೆ.
0 comments:
Post a Comment