ಬಂಟ್ವಾಳ (ಕರಾವಳಿ ಟೈಮ್ಸ್) : ಬಿ ಸಿ ರೋಡು ಮುಖ್ಯ ವೃತ್ತದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಸ್ಕೂಟರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಬಿ ಸಿ ರೋಡು ಸಮೀಪದ ಕಾಮಾಜೆ ನಿವಾಸಿ ಶಿವಪ್ಪ ಎಂಬವರ ಪುತ್ರ ರೀತೇಶ್ ಯಾನೆ ರೀತು (30) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬಿ ಸಿ ರೋಡಿನ ಖಾಸಗಿ ಕೇಬಲ್ ನೆಟ್ ವರ್ಕ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ರೀತೇಶ್ ಮಂಗಳವಾರ ರಾತ್ರಿ ಸುಮಾರು 8 ಗಂಟೆ ವೇಳೆಗೆ ಮನೆಯಿಂದ ನರಿಕೊಂಬು ಸಮೀಪದಲ್ಲಿರುವ ತನ್ನ ರೂಮಿಗೆ ಸ್ಕೂಟರಿನಲ್ಲಿ ಸಂಚರಿಸುವ ವೇಳೆ ಬಿ ಸಿ ರೋಡು ಮುಖ್ಯ ವೃತ್ತದ ಬಳಿ ಲಾರಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟ ರಿತೇಶ್ ಅವರ ತಲೆಗೆ ಗಂಭೀರ ಏಟು ಬಿದ್ದಿದ್ದು ಸ್ಥಳೀಯರು ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ರಾತ್ರಿ ವೇಳೆಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಸ್ಕೂಟರ್ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
0 comments:
Post a Comment