ಬೆಳ್ತಂಗಡಿ (ಕರಾವಳಿ ಟೈಮ್ಸ್) : ತಾಲೂಕಿನ ಕಲ್ಮಂಜ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಇಲ್ಲಿನ ಅಡಿಕೆ ವ್ಯಾಪಾರಿ ಅಚ್ಯುತ್ ಭಟ್ ಅವರ ಮನೆಗೆ ನುಗ್ಗಿದ ಕಳ್ಳರು ನಗದು ಸಹಿತ ಸುಮಾರು 13 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಲೂಟಿಗೈದು ಪರಾರಿಯಾಗಿದ್ದಾರೆ.
ಅಚ್ಯುತ್ ಭಟ್ ಅವರ ಮನೆಯ ನಾಯಿಗಳು ಬೊಗಳುವುದನ್ನು ಕೇಳಿದ ಮನೆ ಮಂದಿ ಬಾಗಿಲು ತೆರೆಯುತ್ತಿದ್ದಂತೆ, ಮುಖವಾಡ ಧರಿಸಿದ್ದ ನಾಲ್ಕು ಮಂದಿ ದರೋಡೆಕೋರರು ಮನೆಯೊಳಗೆ ನುಗ್ಗಿ, ಅಡ್ಡಗಟ್ಟಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಬಳಿಕ ಮನೆ ಮಂದಿಯನ್ನು ಕಟ್ಟಿ ಹಾಕಿ ಸೊತ್ತುಗಳನ್ನು ಕೊಳ್ಳೆ ಹೊಡೆದಿದ್ದಾರೆ ಎಂದು ಪೆÇಲೀಸರು ಮಾಹಿತಿ ನೀಡಿದ್ದಾರೆ.
ದರೋಡೆಕೋರರು 40 ಪವನ್ ಚಿನ್ನಾಭರಣ, 1 ಕೆಜಿ ಬೆಳ್ಳಿ ಹಾಗೂ 25 ಸಾವಿರ ರೂಪಾಯಿ ನಗದು ದೋಚಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment