ಮಂಗಳೂರು (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಮಹಾಮಾರಿ ಕೊರೋನಾ ವೈರಸ್ಸಿಗೆ ಬಲಿಯಾಗಿದ್ದು, ಜಿಲ್ಲೆಯ ಜನ ಆತಂಕಗೊಳ್ಳುವಂತೆ ಮಾಡಿದೆ.
ಈಗಾಗಲೇ ಜಿಲ್ಲೆಯಲ್ಲಿ ಅತೀ ಹೆಚ್ಚು ಕೊರೋನಾ ಸಾವು ಸಂಭವಿಸಿರುವ ಬಂಟ್ವಾಳದಲ್ಲಿ ಇದೀಗ ಮತ್ತೊಬ್ಬರು ಮಹಿಳೆ ಮೃತಪಟ್ಟಿದ್ದಾರೆ. ಅನಾರೋಗ್ಯ ನಿಮಿತ್ತ ಮಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದ 57 ವರ್ಷ ಪ್ರಾಯದ ಮಹಿಳೆಗೆ ಬಳಿಕ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಶನಿವಾರ ಮಧ್ಯರಾತ್ರಿ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಮಂಗಳೂರು ತಾಲೂಕಿನ ಸುರತ್ಕಲ್-ಇಡ್ಯಾ ನಿವಾಸಿ 31 ವರ್ಷ ಪ್ರಾಯದ ಯುವಕ ಕೂಡಾ ಶನಿವಾರ ರಾತ್ರಿ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
0 comments:
Post a Comment