ಕೊರೋನಾ ಚಿಕಿತ್ಸೆ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು : ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಲು ಸಿದ್ದು ಆಗ್ರಹ - Karavali Times ಕೊರೋನಾ ಚಿಕಿತ್ಸೆ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು : ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಲು ಸಿದ್ದು ಆಗ್ರಹ - Karavali Times

728x90

30 June 2020

ಕೊರೋನಾ ಚಿಕಿತ್ಸೆ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು : ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಲು ಸಿದ್ದು ಆಗ್ರಹ



ಬೆಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ಚಿಕಿತ್ಸೆ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ನಿಗಾ ವಹಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ವಿವಿಧ ಪಕ್ಷಗಳಲ್ಲಿರುವ ವೃತ್ತಿನಿರತ ಮತ್ತು ವೈದ್ಯಕೀಯ ಶಿಕ್ಷಣ ಹೊಂದಿರುವ ನಾಯಕರನ್ನು ಇದರಲ್ಲಿ ಸೇರಿಸಿಕೊಳ್ಳಬಹುದು ಎಂದವರು ಸಲಹೆ ನೀಡಿದ್ದಾರೆ. ಕೊರೋನಾ ಚಿಕಿತ್ಸೆಗೆ ಮೀಸಲಾಗಿರುವ ಸರಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ, ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ. ರಾಜಕೀಯ ಪ್ರಭಾವ ಬಳಸಿ ಹಣ, ರಾಜಕೀಯ ಬಲವಿದ್ದವರು ಬದುಕಿಕೊಳ್ಳುತ್ತಾರೆ, ಬಡವರಿಗೆ ದಿಕ್ಕಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅವರ ಕಡೆ ಗಮನಹರಿಸಿ ಎಂದು ಸಿದ್ದರಾಮಯ್ಯ ಕಿವಿ ಮಾತು ಹೇಳಿದ್ದಾರೆ.

ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ದ ಹಕ್ಕಿದೆ. ಸೋಂಕಿತರಿಗೆ ನೀಡುತ್ತಿರುವ ಔಷಧಿ, ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ. ಮುಖ್ಯಮಂತ್ರಿಯವರೇ ಇದು ಅನ್ಯಾಯ ಅಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.








  • Blogger Comments
  • Facebook Comments

0 comments:

Post a Comment

Item Reviewed: ಕೊರೋನಾ ಚಿಕಿತ್ಸೆ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು : ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಲು ಸಿದ್ದು ಆಗ್ರಹ Rating: 5 Reviewed By: karavali Times
Scroll to Top