ಜುಲೈ 2 ರಂದು ಕೆಪಿಸಿಸಿ ನೂತನ ಕಟ್ಟಡದಲ್ಲಿ ಅಧಿಕಾರ ಸೂತ್ರ ಹಿಡಿಯಲಿರುವ ಶಿವಕುಮಾರ್
ಬೆಂಗಳೂರು (ಕರಾವಳಿ ಟೈಮ್ಸ್) : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿ ತಿಂಗಳು ಕಳೆದರೂ ಪದಗ್ರಹಣಕ್ಕೆ ಮಾತ್ರ ಇನ್ನೂ ಕಾಲ ಕೂಡಿ ಬಂದಿರಲಿಲ್ಲ. ಕೊರೋನಾ ಲಾಕ್‍ಡೌನ್ ಹಿನ್ನಲೆಯಲ್ಲಿ ಸರಕಾರದ ಮಾರ್ಗಸೂಚಿಗಳು ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಅಡ್ಡಿಯಾಗಿತ್ತು. ಇದೀಗ ಸ್ವತಃ ಸಿಎಂ ಯಡಿಯೂರಪ್ಪ ಅವರೇ ಸಮ್ಮತಿಸಿರುವುದರಿಂದ ಕೊನೆಗೂ ಅಡ್ಡಿ ಆತಂಕಗಳು ನಿವಾರಣೆಯಾಗಿ ಜುಲೈ 2 ರಂದು ಡಿಕೆಶಿ ಪದಗ್ರಹಣಕ್ಕೆ ದಿನಾಂಕ ನಿಗದಿಯಾಗಿದೆ.
ಕೆಪಿಸಿಸಿ ನೂತನ ಕಟ್ಟಡದಲ್ಲಿ ಜುಲೈ 2 ರಂದು ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ಏಕಕಾಲಕ್ಕೆ 28 ಸಾವಿರ ಲೈವ್ ಸ್ಕ್ರೀನಿಂಗ್ ಅಳವಡಿಕೆ ಮಾಡಿ ಕಾರ್ಯಕರ್ತರಿಗೆ ಪದಗ್ರಹಣ ಕಾರ್ಯಕ್ರಮ ವೀಕ್ಷಿಸಲು ಅನುವು ಮಾಡಿಕೊಡಲಾಗಿದೆ. ಇದರೊಂದಿಗೆ ಬರೋಬ್ಬರಿ 15 ಲಕ್ಷ ಕಾರ್ಯಕರ್ತರ ಜೊತೆ ಏಕಕಾಲಕ್ಕೆ ಸಂಪರ್ಕ ಸಾಧಿಸುವ ಯೋಜನೆ ಡಿಕೆ ಶಿವಕುಮಾರ್ ಅವರದ್ದು. ಲೈವ್‍ನಿಂಗ್‍ನಲ್ಲಿ ತಾಂತ್ರಿಕ ಸಮಸ್ಯೆ ಎದುರಾದರೆ ಪ್ರತ್ಯೇಕ ವ್ಯವಸ್ಥೆಗೂ ಕಾಂಗ್ರೆಸ್ ಮುಂದಾಗಿದೆ. ಅದಕ್ಕಾಗಿ ಗ್ಲೋಬಲ್ ಕಾಲೇಜು ಮೈದಾನದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
0 comments:
Post a Comment