ಬೆಂಗಳೂರು (ಕರಾವಳಿ ಟೈಮ್ಸ್) : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ರಾಜ್ಯ ಸರಕಾರ ಕೊನೆಗೂ ಗ್ರೀನ್ ಸಿಗ್ನಲ್ ನೀಡಿದೆ. ಕೆಲ ಶರತ್ತುಗಳ ಮೇಲೆ ಡಿ.ಕೆ. ಶಿವಕುಮಾರ್ ಅವರು ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ, ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವಂತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಜೂನ್ 14ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಲು ಕಾರ್ಯಕ್ರಮ ನಿಗದಿಯಾಗಿತ್ತು. ಕಾರ್ಯಕ್ರಮಕ್ಕೆ ಅನುಮತಿ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಲಾಕ್‍ಡೌನ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ರಾಜಕೀಯ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಹೇಳಿ ಸರಕಾರ ಈ ಕಾರ್ಯಕ್ರಮಕ್ಕೆ ಅನುಮತಿ £ರಾಕರಿಸಿತ್ತು. ಸರಕಾರದ ಕ್ರಮ ವಿದೋಧಿಸಿ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಸಹಿತ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಸರಕಾರ ತನ್ನ ನಿಲುವನ್ನು ಪರಿಶೀಲಿಸಿ ಕಾರ್ಯಕ್ರಮಕ್ಕೆ ಅನುಮತಿ ನೀಡಿದೆ.
0 comments:
Post a Comment