ಲಡಾಖ್ ಲಡಾಯಿ : ಭಾರತದ 20 ಯೋಧರು ಹುತಾತ್ಮ, ಚೀನಾದ 43 ಸೈನಿಕರು ಹತ - Karavali Times ಲಡಾಖ್ ಲಡಾಯಿ : ಭಾರತದ 20 ಯೋಧರು ಹುತಾತ್ಮ, ಚೀನಾದ 43 ಸೈನಿಕರು ಹತ - Karavali Times

728x90

16 June 2020

ಲಡಾಖ್ ಲಡಾಯಿ : ಭಾರತದ 20 ಯೋಧರು ಹುತಾತ್ಮ, ಚೀನಾದ 43 ಸೈನಿಕರು ಹತ



ನವದೆಹಲಿ (ಕರಾವಳಿ ಟೈಮ್ಸ್) : ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವಿನ ಮಲ್ಲಯುದ್ಧದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಮಂಗಳವಾರ ಭಾರತೀಯ ಸೇನೆ ಅಧಿಕೃತವಾಗಿ ತಿಳಿಸಿದೆ.ಈ ಮಧ್ಯೆ, ಭಾರತೀಯ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ ಚೀನಾದ 43 ಸೈನಿಕರು ಹತರಾಗಿದ್ದಾರೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.

ಇದಕ್ಕು ಮುನ್ನ ಸೋಮವಾರ ತಡರಾತ್ರಿ ಉಭಯ ದೇಶದ ಯೋಧರ ನಡುವಿನ ಸಂಘರ್ಷದಲ್ಲಿ ಭಾರತೀಯ ಸೇನೆಯ ಕರ್ನಲ್ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿತ್ತು. ಇದೇ ವೇಳೆ ಚೀನಾದ ಕಡೆಯೂ ಸಾವು ನೋವು ಸಂಭವಿಸಿದ್ದು, 100ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಚೀನಾದ ಗ್ಲೋಬಲ್ ಟೈಮ್ಸ್ ಪತ್ರಿಕೆಯ ಹಿರಿಯ ವರದಿಗಾರ್ತಿ ವಾಂಗ್ ವೆನ್ವೆನ್ ಎಂಬುವರು ಟ್ವೀಟ್ ಮಾಡಿ ಕಳೆದ ರಾತ್ರಿ ಭಾರತ ಮತ್ತು ಚೀನಾ ಯೋಧರ ನಡುವಿನ ಸಂಘರ್ಷದಲ್ಲಿ ಐವರು ಚೀನಾದ ಸೈನಿಕರು ಹತ್ಯೆಯಾಗಿದ್ದು 11 ಜನ ಗಾಯಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಲಡಾಖ್ ಲಡಾಯಿ : ಭಾರತದ 20 ಯೋಧರು ಹುತಾತ್ಮ, ಚೀನಾದ 43 ಸೈನಿಕರು ಹತ Rating: 5 Reviewed By: karavali Times
Scroll to Top