ಉಪ್ಪಿನಂಗಡಿ (ಕರಾವಳಿ ಟೈಮ್ಸ್) : ಇಲ್ಲಿಗೆ ಸಮೀಪದ ಕರಾಯ ಎಂಬಲ್ಲಿ ಇಬ್ಬರು ಮಕ್ಕಳು ಸೇರಿ ಜನ್ಮ ನೀಡಿದ ತಂದೆಯನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಕರಾಯ ಗ್ರಾಮದ ಮುಗ್ಗದ ಆನೆಪಲ್ಲ ಎಂಬಲ್ಲಿನ ನಿವಾಸಿ ಧರ್ನಪ್ಪ ಪೂಜಾರಿ (69) ಕೊಲೆಯಾದ ವ್ಯಕ್ತಿ. ಸ್ವತಃ ಮಕ್ಕಳಾದ ಮೋನಪ್ಪ ಪೂಜಾರಿ (34) ಹಾಗೂ ನವೀನ್ (28) ಎಂಬವರೇ ಕೊಲೆ ಆರೋಪಿಗಳಾಗಿದ್ದಾರೆ. ಭಾನುವಾರ ರಾತ್ರಿ 11.45 ರಿಂದ 12.15ರ ನಡುವೆ ಆರೋಪಿಗಳು ಈ ಕೃತ್ಯ ನಡೆಸಿರುವುದಾಗಿ ಹೇಳಲಾಗಿದೆ.
ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಇಬ್ಬರು ಮಕ್ಕಳು ಸೇರಿ ಕತ್ತಿ ಹಾಗೂ ಅಡಿಕೆ ಮರದ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಉಪ್ಪಿನಂಗಡಿ ಪೆÇಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
0 comments:
Post a Comment