ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ.ಯಿಂದ ಉಚಿತ ಬಸ್ ಸೇವೆ - Karavali Times ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ.ಯಿಂದ ಉಚಿತ ಬಸ್ ಸೇವೆ - Karavali Times

728x90

20 June 2020

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ.ಯಿಂದ ಉಚಿತ ಬಸ್ ಸೇವೆ



ಬೆಂಗಳೂರು (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಕಲ್ಪಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಹತ್ವದ ನಿರ್ಧಾರ ಕೈಗೊಂಡಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯಾದ್ಯಂತ ಉಚಿತ ಬಸ್ ವ್ಯವಸ್ಥೆಯನ್ನು ಕರ್ನಾಟಕ ಸಾರಿಗೆ ಇಲಾಖೆ ಕಲ್ಪಿಸಿದೆ. ಈ ಮೂಲಕ ವಿದ್ಯಾರ್ಥಿಗಳು ನಿಗಮದ ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜೂನ್ 25 ರಿಂದ ಜುಲೈ 4 ರವರಗೆ ನಡೆಯಲಿವೆ.

ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು. ಪರೀಕ್ಷೆ ಮುಗಿಸಿ ಮನೆಗೆ ತೆರಳಲು ಕೂಡಾ ಉಚಿತವಾಗಿ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ. ಆದೇಶ ತಿಳಿಸಿದೆ.









  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ.ಯಿಂದ ಉಚಿತ ಬಸ್ ಸೇವೆ Rating: 5 Reviewed By: karavali Times
Scroll to Top