ರಾಜ್ಯ ವಿಧಾನ ಪರಿಷತ್ ಚುನಾವಣೆ ದಿನಾಂಕ ಪ್ರಕಟ : ಜೂನ್ 29ರಂದು ಮತದಾನ - Karavali Times ರಾಜ್ಯ ವಿಧಾನ ಪರಿಷತ್ ಚುನಾವಣೆ ದಿನಾಂಕ ಪ್ರಕಟ : ಜೂನ್ 29ರಂದು ಮತದಾನ - Karavali Times

728x90

9 June 2020

ರಾಜ್ಯ ವಿಧಾನ ಪರಿಷತ್ ಚುನಾವಣೆ ದಿನಾಂಕ ಪ್ರಕಟ : ಜೂನ್ 29ರಂದು ಮತದಾನ



ಬೆಂಗಳೂರು (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು ಜೂನ್ 29ಕ್ಕೆ 7 ಸ್ಥಾನಕ್ಕಾಗಿ ಮತದಾನ ನಡೆಯಲಿದೆ.

ಚುನಾವಣಾ ಆಯೋಗ ವಿಧಾನ ಪರಿಷತ್ ಚುನಾವಣೆ ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸಿದೆ. ಜೂನ್ 29ರಂದು ಮತದಾನ ನಡೆದು ಅಂದು ಸಂಜೆಯೇ ಫಲಿತಾಂಶ ಘೋಷಣೆಯಾಗಲಿದೆ. ಜೂನ್ 11ಕ್ಕೆ ಅಧಿಸೂಚನೆ ಹೊರಬೀಳಲಿದ್ದು, ಜೂನ್ 18 ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿರಲಿದೆ. ಜೂನ್ 19 ರಂದು ನಾಮಪತ್ರಗಳ ಪರಿಶೀಲನೆ ನಡೆದರೆ, 22 ನಾಮಪತ್ರ ಹಿಂಪಡೆಯಲು ಕಡೇ ದಿನ. 29 ರಂದು ಮತದಾನ ನೆರವೇರಲಿದೆ.

ವಿಧಾನಸಭೆಯಿಂದ ಆಯ್ಕೆಗೊಂಡ ಪರಿಷತ್ ಸದಸ್ಯರಾದ ನಝೀರ್ ಅಹಮ್ಮದ್, ಜಯಮ್ಮ, ಎಂ.ಸಿ. ವೇಣುಗೋಪಾಲ್, ಎನ್.ಎಸ್. ಬೋಸರಾಜು, ಎಚ್.ಎಂ. ರೇವಣ್ಣ, ಟಿ.ಎ. ಸರವಣ ಹಾಗೂ ಡಿ.ಯು. ಮಲ್ಲಿಕಾರ್ಜುನ ಅವರುಗಳ ಅವಧಿ ಪೂರ್ಣವಾಗುವ ಹಿನ್ನೆಲೆಯಲ್ಲಿ ಈ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಸಂಖ್ಯಾಬಲ ಆಧಾರದಲ್ಲಿ ಬಿಜೆಪಿ 4, ಕಾಂಗ್ರೆಸ್ 2, ಜೆಡಿಎಸ್ 1 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಇದಕ್ಕೂ ಮುನ್ನ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆ ಮುಂದೂಡಿ ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು.

  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯ ವಿಧಾನ ಪರಿಷತ್ ಚುನಾವಣೆ ದಿನಾಂಕ ಪ್ರಕಟ : ಜೂನ್ 29ರಂದು ಮತದಾನ Rating: 5 Reviewed By: karavali Times