ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಬಿ.ಕೆ. ಹರಿಪ್ರಸಾದ್ ಹಾಗೂ ನಸೀರ್ ಅಹ್ಮದ್ ಅವರ ಹೆಸರನ್ನು ಎಐಸಿಸಿ ಬುಧವಾರ ಅಂತಿಮಗೊಳಿಸಿದೆ.
ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಜೂನ್ 29ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನಿಂದ ಹಲವು ನಾಯಕರು ಟಿಕೆಟ್‌ಗಾಗಿ ಪ್ರಯತ್ನಿಸಿದ್ದರು. ನಿನ್ನೆ ಕಾಂಗ್ರೆಸ್ ರಾಜ್ಯ ನಾಯಕರು ಸಭೆ ನಡೆಸಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್‌ಗೆ ಕಳುಹಿಸಿದ್ದರು.
ಒಟ್ಟು 7 ಸ್ಥಾನಗಳಲ್ಲಿ ಬಿಜೆಪಿಗೆ 4 ಕಾಂಗ್ರೆಸ್ ಗೆ 2ಹಾಗೂ ಜೆಡಿಎಸ್ ಪಕ್ಷಕ್ಕೆ 1 ಸ್ಥಾನಕ್ಕೆ ಸ್ಪರ್ಧೆ ಇರಲಿದೆ.
ಗುರುವಾರ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೇ ದಿನವಾಗಿದ್ದು ಇಬ್ಬರೂ ಅಭ್ಯರ್ಥಿಗಳು ನಾಳೆಯೇ ನಾಮಪತ್ರ ಸಲ್ಲಿಕೆ ಮಾಡಬೇಕಿದೆ.
0 comments:
Post a Comment