ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಪುಟ್ಟ ಮಕ್ಕಳ ಆನ್‍ಲೈನ್ ಶಿಕ್ಷಣಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಎಲ್‍ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಹಂತದ 7ನೇ ತರಗತಿವರೆಗೆ ಆನ್‍ಲೈನ್ ಶಿಕ್ಷಣವನ್ನು ಗುರುವಾರ ರದ್ದುಗೊಳಿಸಿದೆ.
ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು, ಆನ್‍ಲೈನ್ ಶಿಕ್ಷಣದ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಆನ್‍ಲೈನ್ ಶಿಕ್ಷಣವನ್ನು 5ನೇ ತರಗತಿ ಬದಲು 7ನೇ ತರಗತಿವರೆಗೂ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ನಿನ್ನೆಯಷ್ಟೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳು ಹಾಗೂ ಶಿಕ್ಷಣ ತಜ್ಞರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ ನಂತರ 5ನೇ ತರಗತಿವರೆಗೆ ಆನ್‍ಲೈನ್ ಶಿಕ್ಷಣ ರದ್ದುಗೊಳಿಸುವ ನಿರ್ಧಾರ ಪ್ರಕಟಿಸಿದ್ದರು. ಇಂದು ಅದನ್ನು 7ನೇ ತರಗತಿವರೆಗೂ ಸರಕಾರ ವಿಸ್ತರಿಸಿದೆ. ಶುಲ್ಕಕ್ಕಾಗಿ ಪೆÇೀಷಕರನ್ನು ಒತ್ತಾಯಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದರು.
0 comments:
Post a Comment