ಉಳ್ಳಾಲ (ಕರಾವಳಿ ಟೈಮ್ಸ್) : ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಅಂಗನವಾಡಿಯಿಂದಲೇ ಉತ್ತಮ ಶಿಕ್ಷಣ ನೀಡಲಾಗುತ್ತದೆ ಎಂದು ಮಂಗಳೂರು ಶಾಸಕ ಯು.ಟಿ. ಖಾದರ್ ಹೇಳಿದರು.
ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಟೆಕಲ್‍ನಲ್ಲಿ ಮಂಜನಾಡಿ ಗ್ರಾಮ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಎಂಜಿನರೇಗಾ ಮತ್ತು ಎಂಆರ್‍ಪಿಎಲ್ ಸಹಯೋಗದಿಂದ ನಿರ್ಮಿಸಿದ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು ಉತ್ತಮವಾದ ಅಂಗನವಾಡಿ ಕೇಂದ್ರ ಇರಬೇಕೆಂಬ ಉದ್ದೇಶದಿಂದ ಎಂಆರ್‍ಪಿಎಲ್ ಸಹಯೋಗದಿಂದ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ
12 ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಾಗಿದೆ ಎಂದರು.
ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಹಮ್ಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ತಾ.ಪಂ. ಅಧ್ಯಕ್ಷ ಮೊಹಮ್ಮದ್ ಮೋನು, ಸದಸ್ಯೆ ಸುರೇಖಾ ಚಂದ್ರಹಾಸ್, ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕ ದ.ಕ. ಜಿಲ್ಲಾಧ್ಯಕ್ಷ ಎನ್.ಎಸ್. ಕರೀಂ, ಮಂಜನಾಡಿ ಗ್ರಾ.ಪಂ. ಉಪಾಧ್ಯಕ್ಷೆ ಮರಿಯಮ್ಮ, ಎಂಆರ್‍ಪಿಎಲ್ ಸಂಸ್ಥೆಯ ಅಧಿಕಾರಿ ವಿಜಯೇಂದ್ರ ಭಟ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಿಭಾಗದ ಜಿಲ್ಲಾ ನಿರೂಪಣಾಧಿಕಾರಿ ಶ್ಯಾಮಲಾ, ಸಿಡಿಪಿಓ ಹರೀಶ್ ಕುಮಾರ್, ಮಂಜನಾಡಿ ಗ್ರಾ.ಪಂ. ಸದಸ್ಯರಾದ ಎಂ.ಎಂ. ಅಬ್ಬಾಸ್, ಪ್ರೇಮ, ಅಬ್ದುಲ್ ಖಾದರ್ ಕಲ್ಕಟ್ಟ, ಅಶ್ರಫ್ ಕೆ.ಪಿ., ಮೊಯಿದ್ದೀನ್ ಮೊದಲಾದವರು ಭಾಗವಹಿಸಿದ್ದರು.
ಇದೇ ವೇಳೆ ಕಟ್ಟಡ ಗುತ್ತಿಗೆದಾರ ಶಂಶುದ್ದೀನ್ ಹರೇಕಳ ಅವರನ್ನು ಸನ್ಮಾನಿಸಲಾಯಿತು. ಮಂಜನಾಡಿ ಗ್ರಾ.ಪಂ. ಸದಸ್ಯ ಇಸ್ಮಾಯಿಲ್ ದೊಡ್ಡಮನೆ ಸ್ವಾಗತಿಸಿ, ಪಂಚಾಯತ್ ಸಿಬ್ಬಂದಿ ಶಾಹುಲ್ ಹಮೀದ್ ವಂದಿಸಿದರು. ಪಿಡಿಒ ಮಂಜಪ್ಪ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment