ಬೆಂಗಳೂರು (ಕರಾವಳಿ ಟೈಮ್ಸ್) : ಎಲ್.ಕೆ.ಜಿಯಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಆನ್‍ಲೈನ್ ಶಿಕ್ಷಣವನ್ನು ರದ್ದುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳು ಹಾಗೂ ಪೆÇೀಷಕರಲ್ಲಿ ಆನ್‍ಲೈನ್ ಶಿಕ್ಷಣದ ಬಗ್ಗೆ ಗೊಂದಲ ಉಂಟಾಗಿತ್ತು. ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್‍ಕೆಜಿಯಿಂದ 5ನೇ ತರಗತಿಯವರೆಗಿನ ಮಕ್ಕಳಿಗೆ ಆನ್‍ಲೈನ್ ಶಿಕ್ಷಣವನ್ನು ರದ್ದುಗೊಳಿಸಿ ತಕ್ಷಣದಿಂದಲೇ ಜಾರಿಯಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಆನ್‍ಲೈನ್ ಶಿಕ್ಷಣದ ಹೆಸರಿನಲ್ಲಿ ಖಾಸಗಿ ಶಾಲೆಗಳು ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಆನ್‍ಲೈನ್ ಶಿಕ್ಷಣದ ಹೆಸರಿನಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. 6 ಮತ್ತು 7ನೇ ತರಗತಿಗೆ ಆನ್‍ಲೈನ್ ಶಿಕ್ಷಣ ರದ್ದು ಸಂಬಂಧ ಸರಕಾರ ನಿರ್ಧಾರ ಪ್ರಕಟಿಸಿಲ್ಲ, ಅದಕ್ಕಾಗಿ ಸಮಿತಿ ರಚಿಸಿದ್ದು, ಸಮಿತಿಯ ಶಿಫಾರಸ್ಸಿನ ನಂತರ ಮಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
0 comments:
Post a Comment