ಬಂಟ್ವಾಳ (ಕರಾವಳಿ ಟೈಮ್ಸ್) : ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ, ಪುಳಿಮಜಲು ನಿವಾಸಿ ಪುರುಷೋತ್ತಮ ಗೌಡ ಎಂಬವರ ಮನೆಗೆ ಬುಧವಾರ ಹಾಡಹಗಲೇ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದಾರೆ.
ಬುಧವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 13.20 ರ ಮಧ್ಯೆ ಈ ಕಳವು ಕೃತ್ಯ ನಡೆದಿದ್ದು, ಕಳ್ಳರು ಸುಮಾರು 60 ಗ್ರಾಂ ತೂಕದ ಚಿನ್ನಾಭರಣ ಕಳವುಗೈದಿದ್ದಾರೆ. ಕಳವುಗೈದ ಆಭರಣಗಳ ಒಟ್ಟು ಮೌಲ್ಯ 1.80 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕಲಂ 454, 380 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment