ಬಂಟ್ವಾಳ (ಕರಾವಳಿ ಟೈಮ್ಸ್) : ಪುದು ವಲಯ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಆಯೋಜಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ‘ಪ್ರತಿಜ್ಞಾ’ ಸಮಾರಂಭದ ಪೂರ್ವಭಾವಿ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ ವೀಕ್ಷಕ ಎಫ್. ಉಮರ್ ಫಾರೂಕ್ ಫರಂಗಿಪೇಟೆ ಅವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಪುದು ಗ್ರಾ.ಪಂ. ಅಧ್ಯಕ್ಷ ರಮ್ಲಾನ್ ಮಾರಿಪಳ್ಲ, ಸದಸ್ಯ ಇಕ್ಬಾಲ್ ಸುಜೀರ್, ತಾ.ಪಂ. ಮಾಜಿ ಸದಸ್ಯ ಆಸಿಫ್ ಇಕ್ಬಾಲ್, ಮುಡಿಪು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮ್ತಿಯಾಝ್ ತುಂಬೆ, ಪುದು ವಲಯ ಕಾಂಗ್ರೆಸ್ ಅಧ್ಯಕ್ಷ ರಪೀಕ್ ಪೇರಿಮಾರ್, ಪುದು ಯುವ ಕಾಂಗ್ರೆಸ್ ಅಧ್ಯಕ್ಷ ನಿಝಾಂ ಫರಂಗಿಪೇಟೆ, ಪುದು ಕಾಂಗ್ರೆಸ್ ವೀಕ್ಷಕ ಭಾಸ್ಕರ್ ರೈ, ಪುದು ಯುವ ಕಾಂಗ್ರೆಸ್ ಮುಖಂಡ ಮಜೀದ್ ಪೇರಿಮಾರ್, ಮಂಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಹಾಗೂ ಮುಡಿಪು ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಉಸ್ತುವಾರಿ ಅತಿಕ್ ಫರಂಗಿಪೇಟೆ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment