ಬಂಟ್ವಾಳ (ಕರಾವಳಿ ಟೈಮ್ಸ್) : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಲೆತ್ತೂರು ಪರಿಸರದ ಬಡಜನರಿಗೆ ಶುಕ್ರವಾರ ಆಹಾರದ ಕಿಟ್ ವಿತರಿಸಲಾಯಿತು.
ಈಗಾಗಲೇ ರಾಹುಲ್ ಗಾಂಧಿ ಅವರು ತನ್ನ ಹುಟ್ಟುಹಬ್ಬ ಪ್ರಯುಕ್ತ ಪಕ್ಷದ ಕಾರ್ಯಕರ್ತರಾಗಲೀ, ಅಭಿಮಾನಿಗಳಾಗಲೀ ಯಾವುದೇ ಆಡಂಬರ ಕಾರ್ಯಕ್ರಮ ನಡೆಸದೆ ಬಡವರಿಗೆ ಆಹಾರ ಹಂಚುವ ಮೂಲಕ, ಬಡ ಜನರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯ ನಡೆಸುವಂತೆ ಕರೆ ನೀಡಿರುವ ಹಿನ್ನಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಬಡವರಿಗೆ ಸ್ಪಂದಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಬಂಟ್ವಾಳ ತಾ ಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ ಶೆಟ್ಟಿ, ಪುರಸಭಾ ಮಾಜಿ ಸದಸ್ಯ ಲೋಕೇಶ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment