ಮಂಗಳೂರು (ಕರಾವಳಿ ಟೈಮ್ಸ್) : ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶನಿವಾರ (ಜೂನ್ 13) ಮತ್ತು ಭಾನುವಾರ (ಜೂನ್ 14) ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಜನರಲ್ಲಿ ಮನವಿ ಮಾಡಿಕೊಂಡಿದೆ. ಅಲ್ಲದೇ ತುರ್ತು ಸೇವೆಗೆ 1077 ಸಂಖ್ಯೆಗೆ ಕರೆ ಮಾಡುವಂತೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
0 comments:
Post a Comment