ಜೂನ್ 19 ರಂದು 18 ಸ್ಥಾನಗಳಿಗೆ ಚುನಾವಣೆ, ಅದೇ ದಿನ ಸಂಜೆ ಫಲಿತಾಂಶ
ನವದೆಹಲಿ (ಕರಾವಳಿ ಟೈಮ್ಸ್) : ಕೊರೋನಾ ಲಾಕ್‍ಡೌನ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ರಾಜ್ಯಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಿದೆ. ರಾಜ್ಯಸಭೆಯ 18 ಸ್ಥಾನಗಳಿಗೆ ಜೂನ್ 19 ರಂದು ಚುನಾವಣೆ ನಡೆಯಲಿದೆ ಎಂದು ಸೋಮವಾರ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಆಂಧ್ರಪ್ರದೇಶ ಮತ್ತು ಗುಜರಾತ್‍ನ ತಲಾ 4, ಜಾರ್ಖಂಡ್‍ನ 2, ಮಧ್ಯಪ್ರದೇಶ, ರಾಜಸ್ಥಾನದ ತಲಾ 3 ಸ್ಥಾನಗಳಿಗೆ ಮತ್ತು ಮಣಿಪುರ ಹಾಗೂ ಮೇಘಾಲಯದ ತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೂನ್ 19 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಚುನಾವಣೆ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ಮಾರ್ಚ್‍ನಲ್ಲಿ ನಿಗದಿಯಾಗಿದ್ದ ರಾಜ್ಯಸಭೆ ಚುನಾವಣೆ ದೇಶದಾದ್ಯಂತ ಹೇರಲ್ಪಟ್ಟಿದ್ದ ಲಾಕ್‍ಡೌನ್ ಕಾರಣದಿಂದ ಮುಂದೂಡಲಾಗಿತ್ತು. ಇದೀಗ ಕೇಂದ್ರ ಸರಕಾರ ಲಾಕ್‍ಡೌನ್ ಸಡಿಲಿಸಿ ಆದೇಶ ನೀಡಿರುವುದರಿಂದ ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ ಫಿಕ್ಸ್ ಮಾಡಿದೆ.
0 comments:
Post a Comment