ಬಂಟ್ವಾಳ (ಕರಾವಳಿ ಟೈಮ್ಸ್) : ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ 107ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾ ಭವನದಲ್ಲಿ ಭಾನುವಾರ ನಡೆಯಿತು.
ಬಂಟ್ವಾಳ ಗ್ರಾಮಾಂತರ ಠಾಣಾ ಎಸೈ ಪ್ರಸನ್ನ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ಶಿಬಿರ ಉದ್ಘಾಟಿಸಿದರು. ಬಂಟ್ವಾಳ ಜನಜಾಗೃತಿ ವೇದಿಕೆ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ತಾ.ಪಂ. ಮಾಜಿ ಸದಸ್ಯ ಪ್ರವೀಣ್ ಆಳ್ವ, ತಾರಾನಾಥ ಕೊಟ್ಟಾರಿ ಪೊಲೀಸ್ ಸಿಬ್ಬಂದಿಗಳು ರಕ್ತದಾನ ಮಾಡಿದರು.
ಕಳ್ಳಿಗೆ ಗ್ರಾ.ಪಂ. ಉಪಾಧ್ಯಕ್ಷ ಪುರುಷ ಸಾಲ್ಯಾನ್ ನೆತ್ರಕೆರೆ, ಪ್ರಮುಖರಾದ ಪುಂಚಮೆ ಪದ್ಮನಾಭ ಶೆಟ್ಟಿ, ಪ್ರಕಾಶ್ ಕಿದೆಬೆಟ್ಟು ಬಾಲಕೃಷ್ ರೈ ದೇವಸ್ಯ, ಎಂ.ಕೆ. ಖಾದರ್, ಜಯರಾಜ್ ಕರ್ಕೆರಾ ಮಂಟಮೆ, ಅರ್ಕುಳ ಸಾಜಿದ್ ಒಡೆಯರ್, ಬಿ. ನಾರಾಯಣ ಮೇರಮಜಲು, ಅರ್ಜುನ್ ಪೂಂಜಾ, ಕಮಲ್‍ಶೆಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸೇವಾಂಜಲಿಯ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಸ್ವಾಗತಿಸಿ, ಪ್ರಸ್ತಾವೆನಗೈದರು. ಕೊಡ್ಮನ್ ದೇವದಾಸ್ ಶೆಟ್ಟಿ ವಂದಿಸಿದರು. ತಾರಾನಾಥ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಒಟ್ಟು 78 ಯುನಿಟ್ ರಕ್ತ ಸಂಗ್ರಹಗೊಂಡಿತು.
0 comments:
Post a Comment