ಮೈಸೂರು (ಕರಾವಳಿ ಟೈಮ್ಸ್) : ಪಿಯುಸಿವರೆಗೂ ಆನ್ ಲೈನ್ ಶಿಕ್ಷಣ ರದ್ದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಸಲಹೆ ನಿಡಿದ್ದಾರೆ.
ನಗರದಲ್ಲಿ ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೊದಲಿನಿಂದಲೂ ಆನ್ ಲೈನ್ ಶಿಕ್ಷಣ ಪದ್ಧತಿಗೆ ವಿರೋಧ ಮಾಡುತ್ತಿದ್ದೇನೆ. ಇದೀಗ ಸರ್ಕಾರ 5ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು ಮಾಡಿದೆ. ಇದು ಸರಿಯಾದ ಕ್ರಮ ಅಲ್ಲ. ನನ್ನ ಪ್ರಕಾರ ಪಿಯುಸಿವರೆಗೂ ಆನ್ ಲೈನ್ ಶಿಕ್ಷಣ ರದ್ದಾಗಬೇಕು ಎಂದರು.
ಮಕ್ಕಳಿಗೆ ನೇರವಾಗಿ ತರಗತಿಯಲ್ಲೇ ಭೋದನೆ ಮಾಡಬೇಕು. ಆ ಕಾರಣಕ್ಕಾಗಿ ಅಕ್ಟೋಬರ್ ವರೆಗೆ ಶಾಲೆ ತೆರೆಯಬಾರದು ಎಂದು ಸರ್ಕಾರಕ್ಕೆ ಸಲಹೆಯಿತ್ತರು. ಇದೇ ವೇಳೆ ಖಾಸಗಿ ಶಾಲೆಗಳ ಶುಲ್ಕ ಕಡಿಮೆ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಚಾರವನ್ನು ಸರ್ಕಾರ ತೀರ್ಮಾನ ಮಾಡಬೇಕು ಎಂದರು.
ನಿನ್ನೆ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿ ಎಲ್‍ಕೆಜಿ, ಯುಕೆಜಿ ಹಾಗೂ ಸಿಬಿಎಸ್‍ಸಿ ಸೇರಿದಂತೆ ಎಲ್ಲಾ ಮಾದರಿಯ ಶಾಲೆಗಳ 1ರಿಂದ 5ನೇ ತರಗತಿವರೆಗೂ ಆನ್‍ಲೈನ್ ಕ್ಲಾಸ್ ರದ್ದುಗೊಳಿಸಿ ಆದೇಶ ನೀಡಿದ್ದರು.
ಆನ್‍ಲೈನ್ ಕ್ಲಾಸ್ ಹೆಸರಿನಲ್ಲಿ ಹೆಚ್ಚು ಶುಲ್ಕ ತೆಗೆದುಕೊಳ್ಳುವ ಹಾಗಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇದೇ ವೇಳೆ ಎಚ್ಚರಿಕೆ ನೀಡಿದ್ದರು.
0 comments:
Post a Comment