ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯಾದ್ಯಂತ ಕೋವಿಡ್ ಸೋಂಕು ಹೆಚ್ಚುತ್ತಲೇ ಇರುವುದರಿಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ. ನಾಳೆಯಿಂದಲೇ ರಾತ್ರಿ ಕಫ್ರ್ಯೂ ಜಾರಿಯಾಗಲಿದ್ದು, ಮುಂದಿನ ಭಾನುವಾರದಿಂದ ಪ್ರತಿ ಭಾನುವಾರ ಸಂಪೂರ್ಣ ಲಾಕ್‍ಡೌನ್ ಮಾಡಲಾಗುವುದು. ಸರಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ ನಿರ್ವಹಿಸುವಂತೆ ಆದೇಶಿಸಲಾಗಿದೆ.
ನಾಳೆಯಿಂದ ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಜುಲೈ 5 ರಿಂದ ಪ್ರತಿ ಭಾನುವಾರ ಪೂರ್ಣ ಲಾಕ್‍ಡೌನ್ ಇರಲಿದೆ ಎಂದು ಹೊಸ ಮಾರ್ಗಸೂಚಿ ಆದೇಶದಲ್ಲಿ ತಿಳಿಸಲಾಗಿದೆ. ಜುಲೈ 5ರಿಂದ ಭಾನುವಾರ ಲಾಕ್‍ಡೌನ್ ವೇಳೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಬಸ್ಸು, ಟ್ಯಾಕ್ಸಿ ಸೇರಿದಂತೆ ಎಲ್ಲಾ ಸೇವೆಗಳು ಬಂದ್ ಆಗಲಿವೆ.
ಸರಕಾರಿ ನೌಕರರೂ ಕೊರೋನಾಗೆ ತುತ್ತಾಗುತ್ತಿರುವುದರಿಂದ ಮುಂದಿನ ವಾರದಿಂದ 5 ದಿನ ಮಾತ್ರ ಸರಕಾರಿ ಕಚೇರಿಗಳು ಕೆಲಸ ನಿರ್ವಹಿಸಲಿವೆ.
0 comments:
Post a Comment