ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಪುಟ್ಟ ಮಕ್ಕಳ ಆನ್‍ಲೈನ್ ಶಿಕ್ಷಣಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್‍ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಹಂತದ 5ನೇ ತರಗತಿವರೆಗೆ ಆನ್‍ಲೈನ್ ಶಿಕ್ಷಣವನ್ನು ರದ್ದುಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.
ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳು ಹಾಗೂ ಶಿಕ್ಷಣ ತಜ್ಞರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ ನಂತರ ಆನ್‍ಲೈನ್ ಶಿಕ್ಷಣ ರದ್ದುಗೊಳಿಸುವ ನಿರ್ಧಾರ ಪ್ರಕಟಿಸಿದ್ದಾರೆ.
ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಸಚಿವರು, ಎಲ್ಲಾ ಶಾಲೆಗಳು ಎಲ್‍ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳನ್ನು ನಿಲ್ಲಿಸಬೇಕು. ಆನ್‍ಲೈನ್ ತರಗತಿ ಹೆಸರಿನಲ್ಲಿ ತೆಗೆದುಕೊಳ್ಳುತ್ತಿರುವ ಶುಲ್ಕವನ್ನು ಕೂಡ ಕೂಡಲೇ £ಲ್ಲಿಸಬೇಕು. ಕೊರೋನಾ ವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ವರ್ಷ ಯಾವುದೇ ಶಾಲೆಗಳು ಶುಲ್ಕ ಹೆಚ್ಚಳ ಮಾಡುವಂತಿಲ್ಲ. ಆದರೆ, ಶುಲ್ಕವನ್ನು ಕಡಿತಗೊಳಿಸಲು ಅವಕಾಶವಿದೆ ಎಂದು ಹೇಳಿದರು.
ಇದೇ ವೇಳೆ ಶುಲ್ಕಕ್ಕಾಗಿ ಪೆÇೀಷಕರನ್ನು ಒತ್ತಾಯಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದರು.
0 comments:
Post a Comment