ಉಡುಪಿ (ಕರಾವಳಿ ಟೈಮ್ಸ್) : ಆಗಸ್ಟ್ ತಿಂಗಳವರೆಗೂ ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿಂದು ಮಾತನಾಡಿದ ಅವರು, ಯಾವುದೇ ಲಾಬಿ, ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿದ್ದಾರೆ.
ನನ್ನ ಗಮನ ಏನಿದ್ದರೂ ಸರಕಾರಿ ಶಾಲೆಗಳ ಸಬಲೀಕರಣ ಮಾಡುವುದು. ಪೆÇೀಷಕರು ಸರಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸುವಂತೆ ಮಾಡುವುದೇ ನನ್ನ ಗುರಿ ಎಂದು ಹೇಳಿದ್ದಾರೆ. ಕೇಂದ್ರ ಸರಕಾರದ ನಿರ್ದೇಶನದಂತೆ ಶಾಲೆಯನ್ನು ಆರಂಭಿಸುವ ಬಗ್ಗೆ ನಾಳೆಯಿಂದ ಅಭಿಪ್ರಾಯ ಸಂಗ್ರಹ ಅಭಿಯಾನ ಆರಂಭಿಸಲಾಗುವುದು. ಪೆÇೀಷಕರಿಗೆ ಮೂರು ಪ್ರಶ್ನೆಗಳನ್ನು ಕೇಳಲಾಗುವುದು. ಯಾವಾಗ ಶಾಲೆ ಪ್ರಾರಂಭಿಸಬೇಕು, ಹೇಗೆ ನಡೆಸಬೇಕು, ಪೆÇೀಷಕರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಈ ಮೂಲಕ ತಿಳಿದುಕೊಳ್ಳುತ್ತೇವೆ. ನಾಳೆಯಿಂದ ಪ್ರಜಾಸತ್ತಾತ್ಮಕ ರೀತಿಯಲ್ಲಿ ಅಭಿಪ್ರಾಯ ಸಂಗ್ರಹ ಮಾಡಲಾಗುವುದು ಎಂದರು.
0 comments:
Post a Comment