ಮಂಗಳೂರು (ಕರಾವಳಿ ಟೈಮ್ಸ್) : ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ವತಿಯಿಂದ ನೂತನ ತುಂಬೆ ಡ್ಯಾಮಿನಿಂದ ಮುಳುಗಡೆಯಾದ ಜಮೀನಿಗೆ ನೆಲ ಬಾಡಿಗೆ ಅಥವಾ ಶಾಶ್ವತ ಭೂ ಪರಿಹಾರ ದೊರೆಯದೇ ಇರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಕಳೆದ ವಿಧಾನಸಭೆ ಅಧಿವೇಶನದಲ್ಲಿ ಬಂಟ್ವಾಳ ಶಾಸಕರು ಸಂತ್ರಸ್ತ ರೈತರಿಗೆ ವರತೆ ಪ್ರದೇಶಕ್ಕೂ ಭೂ ಪರಿಹಾರ ಭರಿಸಬೇಕು ಎಂಬುದಾಗಿ ಸರಕಾರದ ಗಮನ ಸೆಳೆದಾಗ ಕಂದಾಯ ಸಚಿವರು ವರ್ಗ ಪ್ರದೇಶಕ್ಕೂ ಭೂ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಈವರೆಗೆ ಅದರ ಅನುಷ್ಠಾನ ಆಗದೆ ಇರುವುದರ ಬಗ್ಗೆ ಗಮನ ಸೆಳೆಯಲಾಯಿತು.
ಈ ಸಂದರ್ಭ ತುಂಬೆ ಡ್ಯಾಂ ರೈತರ ಹೋರಾಟ ಸಮಿತಿ ಅಧ್ಯಕ್ಷ ಎಂ ಸುಬ್ರಹ್ಮಣ್ಯ ಭಟ್, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಶಂಕರ ಬಾಸ್ರಿತಾಯ, ಜಿ ಪಂ ಮಾಜಿ ಸದಸ್ಯ ರಾಧಾಕೃಷ್ಣ ಆಳ್ವ, ಸಜಿಪಮೂಡ ಗ್ರಾ ಪಂ ಮಾಜಿ ಅಧ್ಯಕ್ಷ ಬಿ ಶೋಭಿತ್ ಪೂಂಜಾ, ಜಯ ಕರ್ನಾಟಕ ಜಿಲ್ಲಾಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತರಿದ್ದರು. ರೈತರ ಸಮಸ್ಯೆ ಪರಿಹರಿಸುವುದಾಗಿ ಈ ಸಂದರ್ಭ ಉಸ್ತುವಾರಿ ಸಚಿವರು ಭರವಸೆ ನೀಡಿದ್ದಾರೆ ಎಂದು ಸುಬ್ರಹ್ಮಣ್ಯ ಭಟ್ ತಿಳಿಸಿದ್ದಾರೆ.
0 comments:
Post a Comment