ಮಂಗಳೂರು (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ ಅವರ ಕಾರು ಬುಧವಾರ ಮೂಡಬಿದ್ರೆಯ ಮಿಜಾರು ಸಮೀಪ ಅಪಘಾತಕ್ಕೀಡಾಗಿದ್ದು, ಸುದರ್ಶನ್ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಿಜೆಪಿ ಅಧ್ಯಕ್ಷ ಸುದರ್ಶನ್ ಅವರು ಮೂಡಬಿದ್ರೆಯಿಂದ ಮಂಗಳೂರಿಗೆ ಬರುತ್ತಿದ್ದ ವೇಳೆ ಮಿಜಾರು ಸಮೀಪೀ ಅವಘಡ ಸಂಭವಿಸಿದೆ.
ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ನಿಯಂತ್ರಣ ಕಳೆದುಕೊಂಡು ಕಾರು ಪಲ್ಟಿಯಾಗಿ ಕಂಪೌಂಡ್ ಗೋಡೆಯೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ ಎನ್ನಲಾಗಿದೆ.
ಘಟನೆಯಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸುದರ್ಶನ್ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.
0 comments:
Post a Comment