ಬೆಂಗಳೂರು (ಕರಾವಳಿ ಟೈಮ್ಸ್) : ಎನ್.ಆರ್.ಸಿ. ಪ್ರತಿಭಟನೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ 19 ವರ್ಷದ ಕಾಲೇಜ್ ವಿದ್ಯಾರ್ಥಿನಿ ಅಮೂಲ್ಯ ಲಿಯಾನ್ ವಿರುದ್ಧದ ದೇಶದ್ರೋಹ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಏಜೆನ್ಸಿಗೆ (ಎನ್.ಐ.ಎ) ವರ್ಗಾಯಿಸಬೇಕೆಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಇದು ಎನ್ ಐಎ ತನಿಖೆಗೆ ವಹಿಸುವಂತಹ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿರುವ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಾಧೀಶ ಎಚ್.ಪಿ. ಸಂದೇಶ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಆಕೆಗೆ ಜಾಮೀನು ಮಂಜೂರಾತಿಯನ್ನು ರದ್ದುಗೊಳಿಸುವಂತೆ ಅಥವಾ ಚಾರ್ಜ್ ಶೀಟ್ ದಾಖಲಿಸಲು ವಿಳಂಬ ಮಾಡುತ್ತಿರುವ ತನಿಖಾ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸುವಂತೆ ಮ್ಯಾಜಿಸ್ಟ್ರೇಟ್ ಕೋರ್ಟ್‍ಗೆ ಆದೇಶಿಸಿದೆ.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಫೆಬ್ರವರಿ 21 ರಂದು ನಡೆದ ಸಿಎಎ ವಿರುದ್ಧದ ಸಮಾವೇಶದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಅಮೂಲ್ಯಳನ್ನು ಬಂಧಿಸಿದ ನಗರ ಪೆÇಲೀಸರು ಆಕೆಯ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಿದ್ದರು. ಜೂನ್‍ನಲ್ಲಿ ಜಾಮೀನಿನ ಮೇಲೆ ಆಕೆ ಜೈಲಿನಿಂದ ಹೊರಗೆ ಬಂದಿದ್ದಾಳೆ. ಜೂನ್. 16 ರಂದು ಎಚ್.ಎಲ್. ವಿಶಾಲ ರಘು ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಏಕ ಸದಸ್ಯ ಪೀಠ, ವಿಭಾಗೀಯ ಪೀಠಕ್ಕೆ ವರ್ಗಾಯಿಸಿತ್ತು. ಅಮೂಲ್ಯ ಭಾಷಣದ ಹಿಂದೆ ಸಲಹಾ ಸಮಿತಿ ಇದೆಯೇ? ಅದು ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವುದೇ ಎಂಬುದರ ಬಗ್ಗೆ ದೃಢಪಡಿಸಿಕೊಳ್ಳಬೇಕಾಗಿದೆ ಎಂದು ರಘು ಅರ್ಜಿಯಲ್ಲಿ ಹೇಳಿದ್ದರು.
ಈ ಮಧ್ಯೆ ಜೆಎಂಎಫ್‍ಸಿ ಮತ್ತು ಸೆಷನ್ಸ್ ಕೋರ್ಟ್‍ನಲ್ಲಿ ಅಮೂಲ್ಯ ವಿರುದ್ದದ ದೇಶದ್ರೋಹ ಪ್ರಕರಣದ ಪರ ವಾದ ಮಂಡಿಸಲು ಐಎಸ್ ಪ್ರಮೋದ್ ಚಂದ್ರ ಅವರನ್ನು ವಿಶೇಷ ಪಬ್ಲಿಕ್ ಪ್ಯಾಸಿಕ್ಯೂಟರ್ ಆಗಿ ರಾಜ್ಯ ಸರಕಾರ ನೇಮಕ ಮಾಡಿದೆ.
0 comments:
Post a Comment