ಬಂಟ್ವಾಳ (ಕರಾವಳಿ ಟೈಮ್ಸ್) : ಕಾರ್ಮಿಕ ಕಾನೂನುಗಳ ತಿದ್ದುಪಡಿ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ನಡೆಸಲಾಗುತ್ತಿರುವ ದೇಶವ್ಯಾಪಿ ಪ್ರತಿಭಟನೆಯ ಅಂಗವಾಗಿ ಜೆಸಿಟಿಯು ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಬಿ.ಸಿ.ರೋಡ್ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಾಲೂಕು ತಹಶಿಲ್ದಾರರ ಮುಖಾಂತರ ಮನವಿ ಸಲ್ಲಿಸಲಾಯಿತು.
ಸಿಐಟಿಯು ಮುಖಂಡ ರಾಮಣ್ಣ ವಿಟ್ಲ, ಎಐಟಿಯುಸಿ ಪ್ರಮುಖರಾದ ಬಿ ಶೇಖರ್ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು. ಲಾಕ್‍ಡೌನ್ ಸಂಧರ್ಭದ ವೇತನ ಪಾವತಿಸಿ, ಕೋರೋನಾ ವಾರಿಯರ್ಸ್ ಖಾಯಂಗೊಳಿಸಿ, ಎಲ್ಲಾ ಕಾರ್ಮಿಕರಿಗೆ ರೂ. 7500/- ಹಾಗೂ 10 ಕೆಜಿ ಆಹಾರಧಾನ್ಯಗಳನ್ನು ಮುಂದಿನ 6 ತಿಂಗಳವರೆಗೆ ಒದಗಿಸಬೇಕೆಂಬ ಬೇಡಿಕೆಗಳನ್ನು ಇದೇ ವೇಳೆ ಸರಕಾರದ ಮುಂದಿಡಲಾಯಿತು.
ವಿವಿಧ ಸಂಘಟನೆಗಳ ನಾಯಕರುಗಳಾದ ಸುರೇಶ್ ಕುಮಾರ್ ಬಂಟ್ವಾಳ, ಸುರೇಂದ್ರ ಕೋಟ್ಯಾನ್, ಪ್ರಭಾಕರ ದೈವಗುಡ್ಡೆ, ಲೋಲಾಕ್ಷಿ ಬಂಟ್ವಾಳ, ಮಹಮ್ಮದ್ ಇಕ್ಬಾಲ್ ಹಳೆಮನೆ, ಭಾರತಿ ಪ್ರಶಾಂತ್, ನ್ಯಾಯವಾದಿ ತುಳಸೀದಾಸ್ ವಿಟ್ಲ, ಬಿ ನಾರಾಯಣ, ಬಾಸ್ಕರ್, ದಿನೇಶ್ ಆಚಾರಿ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
0 comments:
Post a Comment