ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಚಿಕ್ಕಯ್ಯಮಠ ಎಂಬಲ್ಲಿನ ಸಂಬಂಧಿಕರ ಮನೆಗೆ ಬಂದು ಕಳೆದ ಶನಿವಾರ ಮುಂಜಾನೆಯಿಂದ ನಾಪತ್ತೆಯಾಗಿದ್ದ ಸಜಿಪಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಮಹಿಳೆ ಗೋಪಿ ಪೂಜಾರಿ (48) ಎಂಬವರ ಮೃತದೇಹ ಸೋಮವಾರ ತುಂಬೆ ಡ್ಯಾಂ ಬಳಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಮೃತ ಮಹಿಳೆ ಕೆಲ ದಿನಗಳ ಹಿಂದೆ ಬಿ ಸಿ ರೋಡು ಸಮೀಪದ ಚಿಕ್ಕಯ್ಯಮಠ ಎಂಬಲ್ಲಿನ ಅಕ್ಕನ ಮನೆಗೆ ಬಂದವರು ಶನಿವಾರದಿಂದ ನಾಪತ್ತೆಯಾಗಿದ್ದರು. ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯಲ್ಲಿ ಅವರ ಶಾಲು ಹಾಗೂ ಬಳೆ ಪತ್ತೆಯಾದ ಹಿನ್ನಲೆಯಲ್ಲಿ ನೇತ್ರಾವತಿ ನದಿಗೆ ಹಾರಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ನದಿಯಲ್ಲಿ ಹುಡುಕಾಟ ಆರಂಭಿಸಲಾಗಿತ್ತಾದರೂ ಪತ್ತೆಯಾಗಿರಲಿಲ್ಲ. ಸೋಮವಾರ ತುಂಬೆ ಡ್ಯಾಂ ಬಳಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment