ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಚೆನ್ನೈತ್ತೋಡಿ ಗ್ರಾ ಪಂ ವ್ಯಾಪ್ತಿಯ ಕೊಡಂಬೆಟ್ಟು ಗ್ರಾಮದ ಅಲೆಪ್ಪಾಡಿ-ಮುಂಡೊಟ್ಟು ಎಂಬಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ಮಮತಾ ಗಟ್ಟಿ ಎಂಬವರಿಗೆ ಸ್ಥಳೀಯ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಗುರುವಾರ ಹಲ್ಲೆ ನಡೆಸಿದ್ದು, ಗಾಯಾಳು ಆಶಾ ಕಾರ್ಯಕರ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಿಂದ ಕಾರ್ಯ ನಿರ್ವಹಿಸುತ್ತಿರುವ ಮಮತಾ ಗಟ್ಟಿ ಅವರಿಗೆ ಬೆಳಗ್ಗೆ ಸುಮಾರು 10 ಗಂಟೆಗೆ ಕರ್ತವ್ಯದಲ್ಲಿರುವಾಗ ದೊಣ್ಣೆಯಿಂದ ಏಕಾ ಏಕಿ ಹಲ್ಲೆ ನಡೆಸಿದ್ದು, ಪರಿಣಾಮ ತಲೆ, ಕೈಗೆ ಗಾಯಗಳಾಗಿವೆ.
ತಕ್ಷಣ ಅವರನ್ನು ವಾಮದಪದವು ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಬಗ್ಗೆ ವಾಮದ ಪದವು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಉಮೇಶ್ ಅಡ್ಯಂತಾಯ ಅವರು ಪೂಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
0 comments:
Post a Comment