ಬಂಟ್ವಾಳ (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯಾಧಿಕಾರಿ ಡಾ. ವಾಣಿಶ್ರೀ ಅವರು ಬೆಳ್ತಂಗಡಿ ತಾಲೂಕಿಗೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಶನಿವಾರ ಇಲ್ಲಿನ ಆರೋಗ್ಯ ಕೇಂದ್ರದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ನಗರ ಆರೋಗ್ಯ ಕೇಂದ್ರದ ಅಧ್ಯಕ್ಷ, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ ಅವರು ಸನ್ಮಾನಿಸಿ ಬೀಳ್ಕೊಟ್ಟರು. ಈ ಸಂದರ್ಭ ವೈದ್ಯಾಧಿಕಾರಿ ಹಸೀನಾ ಬಾನು, ಪ್ರಮುಖರಾದ ಹರೀಶ್, ಜಲಜಾಕ್ಷಿ, ಸಮದ್ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment