ಕೋರ್ಟ್ ತೀರ್ಪಿನ ಪ್ರಕಾರ ಪರೀಕ್ಷೆ ನಡೆಸಲಾಗುವುದು : ಸಚಿವ ಅಶ್ವಥನಾರಾಯಣ
ಬೆಂಗಳೂರು (ಕರಾವಳಿ ಟೈಮ್ಸ್) : ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್'ಗಳ ಪ್ರವೇಶಕ್ಕಾಗಿ ನಡೆಸಲಿರುವ ಸಿಇಟಿ ಪರೀಕ್ಷಾ ಸಿದ್ಧತೆಗಳ ಕುರಿತ ವರದಿಯನ್ನು ರಾಜ್ಯ ಸರ್ಕಾರವು ಬುಧವಾರ ಹೈಕೋರ್ಟ್'ಗೆ ಸಲ್ಲಿಸಿದೆ. ಈ ವರದಿ ಆಧಾರದ ಮೇಲೆ ನ್ಯಾಯಾಲಯ ಪರೀಕ್ಷೆ ನಡೆಸಬೇಕೋ ಅಥವಾ ಬೇಡವೋ ಎಂಬ ಬಗ್ಗೆ ನೀಡುವ ತೀರ್ಪಿನಂತೆ ನಡೆದುಕೊಳ್ಳಲು ತೀರ್ಮಾನಿಸಿದೆ.
ರಾಜ್ಯದಲ್ಲಿ ಜುಲೈ 30, 31, ಹಾಗೂ ಆಗಸ್ಟ್ 1 ರಂದು ಸಿಇಟಿ ಪರೀಕ್ಷೆ ನಡೆಸುವ ಸಂಬಂಂಧ ಮರು ಪರಿಶೀಲನೆ ನಡೆಸುವಂತೆ ಮಂಗಳವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಈ ಆಧಾರದಲ್ಲಿ ಮಂಗಳವಾರ ಸಂಜೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಶಿಕ್ಷಣ ಇಲಾಖೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಸಾರಿಗೆ, ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಈ ಬಗ್ಗೆ ಪ್ರತಿಕ್ರಯಿಸಿರುವ ಸಚಿವರು ಸಭೆಯಲ್ಲಿ ವ್ಯಕ್ತವಾದ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಅಡ್ವೋಕೇಟ್ ಜನರಲ್ ಮೂಲಕ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
0 comments:
Post a Comment