ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 7ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಧಾರವಾಡ, ಬೀದರ್, ಬೆಳಗಾವಿ, ರಾಯಚೂರು, ಯಾದಿಗರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
0 comments:
Post a Comment