ಬಂಟ್ವಾಳ (ಕರಾವಳಿ ಟೈಮ್ಸ್) : ಗೂಡಿನಬಳಿ ಎಸ್ಕೆಎಸ್ಸೆಸ್ಸೆಫ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಲತೀಫ್ ಖಾನ್ (45) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ತೀವ್ರ ಜ್ವರ ಕಾರಣದಿಂದ ಕಳೆದ ಎರಡು ದಿನಗಳ ಹಿಂದೆ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಭಾನುವಾರ ಸಂಜೆ ಮೃತಪಟ್ಟಿದ್ದಾರೆ.
ಸಮಸ್ತದ ಸಕ್ರಿಯ ಕಾರ್ಯಕರ್ತರಾಗಿದ್ದ ಲತೀಫ್ ಖಾನ್ ಎಸ್ಕೆಎಸ್ಸೆಸ್ಸೆಫ್ ಗೂಡಿನಬಳಿ ಶಾಖಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಾಂಗ್ರೆಸ್ ಮುಖಂಡರಾಗಿ ಸ್ಥಳೀಯವಾಗಿ ಜನಾನುರಾಗಿಯಾಗಿದ್ದ ಇವರು ಬಂಟ್ವಾಳ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ಇದರ ಮಾಜಿ ಸದಸ್ಯರಾಗಿದ್ದರು. ಗೂಡಿನಬಳಿ ಮಸ್ಜಿದ್-ಎ-ಮುತ್ತಲಿಬ್ ಇದರ ಆಡಳಿತ ಸಮಿತಿ ಸದಸ್ಯರಾಗಿದ್ದರು.
ಮೃತರು ತಾಯಿ, ಪತ್ನಿ, ಇಬ್ಬರು ಅಪ್ರಾಪ್ತ ಪುತ್ರರು, ಓರ್ವ ಪುತ್ರಿ, ಇಬ್ಬರು ಸಹೋದರರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಸಂತಾಪ
ಲತೀಫ್ ಖಾನ್ ನಿಧನಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ, ಮಂಗಳೂರು ಶಾಸಕ ಯು ಟಿ ಖಾದರ್, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಬಂಟ್ವಾಳ ತಾ ಪಂ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಬಂಟ್ವಾಳ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ನಂದಾವರ, ಗೂಡಿನಬಳಿ ಎಸ್ಕೆಎಸ್ಸೆಸ್ಸೆಫ್ ಪ್ರಮುಖರ ಸಹಿತ ಹಲವು ಮಂದಿ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
0 comments:
Post a Comment