ಚೆನ್ನೈ (ಕರಾವಳಿ ಟೈಮ್ಸ್) : ತಮಿಳ್ನಾಡಿನಲ್ಲಿ ಕೊರೋನಾ ವೈರಸ್ ನಿಯಂತ್ರಣ ಮೀರಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ರಾಜ್ಯ ಸರಕಾರ ಆ. 31 ರವರೆಗೆ ಲಾಕ್‍ಡೌನ್ ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಹಿಂದೆ ನೀಡಿದ್ದ ವಿನಾಯ್ತಿ ಮತ್ತು ನಿರ್ಬಂಧಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರ ಅಬಿಪ್ರಾಯಗಳ ಆಧಾರದ ಮೇಲೆ ಸರಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ತಿಳಿಸಿದ್ದಾರೆ.
ಇಲ್ಲಿಯವರೆಗೆ ಲಾಕ್‍ಡೌನ್ ಜಾರಿಯಿರುವ ಪ್ರದೇಶಗಳಲ್ಲಿ ಆಗಸ್ಟ್ ಅಂತ್ಯದವರೆಗೆ ಸಂಪೂರ್ಣ ಲಾಕ್‍ಡೌನ್ ಇರಲಿದ್ದು, ಭಾನುವಾರಗಳಂದು ಕೂಡ ವಿನಾಯ್ತಿ ಇರುವುದಿಲ್ಲ. ಇತರ ಜಿಲ್ಲೆಗಳಲ್ಲಿ ಸದ್ಯ ಇರುವ ನಿರ್ಬಂಧಗಳೇ ಮುಂದುವರಿಲಿದೆ ಎಂದವರು ತಿಳಿಸಿದ್ದಾರೆ. ಕೇಂದ್ರ ಸರಕಾರದ ಮಾರ್ಗಸೂಚಿ ಅನುಸರಿಸಿ ರಾಜ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುವುದು. ಈ ಸಂದರ್ಭ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಸಿಎಂ ತಿಳಿಸಿದಿದ್ದಾರೆ.
ರಾಜ್ಯದಿಂದ ಹೊರಗೆ ಪ್ರಯಾಣ ಮಾಡುವವರು ಮತ್ತು ಒಳಗೆ ಪ್ರವೇಶಿಸುವವರು ಕಡ್ಡಾಯವಾಗಿ ಇ-ಪಾಸ್ ಪಡೆಯಬೇಕಾಗಿದೆ. ಅಂತರ ಜಿಲ್ಲಾ ಪ್ರಯಾಣಕ್ಕೆ ಕೂಡ ಇದು ಅನ್ವಯವಾಗುತ್ತದೆ ಎಂದು ಸಿಎಂ ಪಳನಿಸ್ವಾಮಿ ತಿಳಿಸಿದ್ದಾರೆ.
0 comments:
Post a Comment