ಕ್ವಾರಂಟೈನ್ ನಿಯಮ ಸಡಿಲಗೊಳಿಸಿದ ಸರಕಾರ : ಹೊರ ರಾಜ್ಯ ಹಾಗೂ ವಿದೇಶದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ರದ್ದು - Karavali Times ಕ್ವಾರಂಟೈನ್ ನಿಯಮ ಸಡಿಲಗೊಳಿಸಿದ ಸರಕಾರ : ಹೊರ ರಾಜ್ಯ ಹಾಗೂ ವಿದೇಶದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ರದ್ದು - Karavali Times

728x90

6 July 2020

ಕ್ವಾರಂಟೈನ್ ನಿಯಮ ಸಡಿಲಗೊಳಿಸಿದ ಸರಕಾರ : ಹೊರ ರಾಜ್ಯ ಹಾಗೂ ವಿದೇಶದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ರದ್ದು



14 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿ ಹೊಸ ಮಾರ್ಗಸೂಚಿ ಬಿಡುಗಡೆ


ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯ ಸರ್ಕಾರ ಕ್ವಾರಂಟೈನ್ ನಿಯಮಗಳನ್ನು ಮತ್ತಷ್ಟು ಸಡಿಲಿಸಿದ್ದು, ಹೊರ ರಾಜ್ಯ ಅಥವಾ ವಿದೇಶದಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ ಸಾಂಸ್ಥಿಕ ಕ್ವಾರಂಟೈನ್ ರದ್ದುಗೊಳಿಸಿ, 14 ದಿನ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಿದೆ.

ಈ ಮೊದಲು ಹೊರ ರಾಜ್ಯ ಹಾಗೂ ವಿದೇಶದಿಂದ ಬರುವವರಿಗೆ ಏಳು ದಿನ ಸರ್ಕಾರಿ ಅಥವಾ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯವಾಗಿತ್ತು. ಇದೀಗ ಸರಕಾರ ಅದನ್ನು ರದ್ದುಗೊಳಿಸಿದ್ದು, ಮನೆಯಲ್ಲೇ 14 ದಿನ ಕ್ವಾರಂಟೈನ್‌ಗೆ ಒಳಗಾದರೆ ಸಾಕು ಎಂದು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಈ ಹಿಂದೆ ರಾಜ್ಯ ಸರ್ಕಾರ ಹೊರ ರಾಜ್ಯ ಅಥವಾ ವಿದೇಶದಿಂದ ಆಗಮಿಸುವವರು ಖಡ್ಡಾಯವಾಗಿ 7 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನ ಹೋಮ್‌ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದು ನಿಯಮ ರೂಪಿಸಿತ್ತು. ಅಲ್ಲದೆ, ಕ್ವಾರಂಟೈನ್‌ಗೆ ಒಳಗಾಗುವವರೇ ಅದರ ಹಣವನ್ನು ಪಾವತಿ ಮಾಡಬೇಕು ಎಂದು ಸೂಚಿಸಲಾಗಿತ್ತು. ಈ ನಿಯಮದಿಂದಾಗಿ ಅನೇಕರಿಗೆ ಆರ್ಥಿಕವಾಗಿ ಸಾಕಷ್ಟು ತೊಂದರೆಯೂ ಉಂಟಾಗಿತ್ತು.

ರೈಲು, ವಿಮಾನದ ಮೂಲಕ ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವವರು ಹೊಸ ಕ್ವಾರಂಟೈನ್ ನಿಯಮಗಳನ್ನು ತಿಳಿದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಹೇಳಿದೆ.










  • Blogger Comments
  • Facebook Comments

0 comments:

Post a Comment

Item Reviewed: ಕ್ವಾರಂಟೈನ್ ನಿಯಮ ಸಡಿಲಗೊಳಿಸಿದ ಸರಕಾರ : ಹೊರ ರಾಜ್ಯ ಹಾಗೂ ವಿದೇಶದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ರದ್ದು Rating: 5 Reviewed By: karavali Times
Scroll to Top