ಬೆಂಗಳೂರು (ಕರಾವಳಿ ಟೈಮ್ಸ್) : ಬಿಜೆಪಿ ರಾಜ್ಯಾಧ್ಯಕ್ಷ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಳಿನ್ ಕುಮಾರ್ ಕಟೀಲ್ ಕಳೆದ ನಾಲ್ಕು ದಿನಗಳಿಂದಲೂ ಜಿಲ್ಲಾ ಪ್ರವಾಸದಲ್ಲಿದ್ದರು. ಮಂಗಳೂರು, ಯಾದಗಿರಿ, ಬೀದರ್, ಗುಲರ್ಗಾ ಜಿಲೆಗಳಲ್ಲಿ ಹಲವು ಸಭೆಗಳನ್ನು ನಡೆಸಿದ್ದರು. ಶನಿವಾರ ಕಟೀಲ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಬಳಿಕ ವೈದ್ಯರ ಸಲಹೆ ಮೇರೆಗೆ ಕಟೀಲ್ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಭಾನುವಾರ ಇದರ ವರದಿ ಬಂದಿದ್ದು, ಪಾಸಿಟಿವ್ ಇರುವುದು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಟೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಸಂಸದ ನಳಿನ್ “ನಾನು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ” ಎಂದು ಬರೆದುಕೊಂಡಿದ್ದಾರೆ.
ನಳಿನ್ ಕುಮಾರ್ ಶೀಘ್ರವೇ ಗುಣಮುಖರಾಗಿ ಬರಲಿ, ಅವರ ಹಾಗೂ ಅವರ ಕುಟುಂಬದ ಮೇಲೆ ನನ್ನ ಪ್ರಾರ್ಥನೆ ಯಾವತ್ತೂ ಇದೆ ಎಂದು ಮಾಜಿ ಸಚಿವ, ಮಂಗಳೂರು ಶಾಸಕ ಯು ಟಿ ಖಾದರ್ ಟ್ವೀಟ್ ಮಾಡಿ ಹಾರೈಸಿದ್ದಾರೆ.
0 comments:
Post a Comment