ಸೌತಾಂಪ್ಟನ್ (ಕರಾವಳಿ ಟೈಮ್ಸ್) : ಇಂಗ್ಲೆಂಡ್ ತಂಡದ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟ್‍ನಲ್ಲಿ 600 ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎಂಬ ಕೀರ್ತಿಗೆ ಭಾಜನರಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.
ಇಂಗ್ಲೆಂಡಿನ ಸೌಥ್ಯಾಂಪ್ಟನ್‍ನಲ್ಲಿ ಪಾಕಿಸ್ತಾನದ ವಿರುದ್ಧ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ನಾಯಕ ಅಜರ್ ಅಲಿ ವಿಕೆಟ್ ಉರುಳಿಸುವ ಮೂಲಕ ಜೇಮ್ಸ್ ಆಂಡರ್ಸನ್ ಅವರು ಈ ಸಾಧನೆ ಪೂರೈಸಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್ ಎಂಬ ಕೀರ್ತಿಗೂ ಆಂಡರ್ಸನ್ ಭಾಜನರಾದರು. ಇಂಗ್ಲೆಂಡ್-ಪಾಕಿಸ್ತಾನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ಕೊನೆಯ ದಿನ ಆಂಡರ್ಸನ್ ಈ ದಾಖಲೆ ಬರೆದಿದ್ದಾರೆ.
38 ವರ್ಷ ವಯಸ್ಸಿನ ಆಂಡರ್ಸನ್ ಈವರೆಗೆ ಒಟ್ಟು 156 ಟೆಸ್ಟ್ ಪಂದ್ಯಗಳ 291 ಇನ್ನಿಂಗ್ಸ್‍ಗಳಲ್ಲಿ 26.77ರ ಸರಾಸರಿಯಲ್ಲಿ 600 ವಿಕೆಟ್ ಕಬಳಿಸಿದ್ದಾರೆ. ಆ ಮೂಲಕ ಟೆಸ್ಟ್ ಕ್ರಿಕೆಟ್‍ನಲ್ಲಿ 600 ವಿಕೆಟ್ ಕಬಳಿಸಿದ ಮೊದಲ ಬೌಲರ್ ಎಂಬ ಕೀರ್ತಿಗೆ ಆಂಡರ್ಸನ್ ಪಾತ್ರರಾಗಿದ್ದಾರೆ. ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‍ಗಳ ಪಟ್ಟಿಯಲ್ಲಿ ಜೇಮ್ಸ್ ನಾಲ್ಕನೇ ಸ್ಥಾನದಲ್ಲಿದ್ದು, ಸ್ಪಿನ್ನರ್‍ಗಳಾದ ಶ್ರೀಲಂಕಾದ ಮುತ್ತಯ್ಯ ಮುರುಳಿಧರನ್ (800 ವಿಕೆಟ್), ಆಸ್ಟ್ರೇಲಿಯಾದ ಶೇನ್ ವಾರ್ನ್ (708 ವಿಕೆಟ್) ಮತ್ತು ಭಾರತದ ಅನಿಲ್ ಕುಂಬ್ಳೆ (619 ವಿಕೆಟ್) ಮೊದಲ ಮೂರು ಸ್ಥಾನಗಳಲ್ಲಿದ್ದಾರೆ.
0 comments:
Post a Comment