ಚೆನ್ನೈ (ಕರಾವಳಿ ಟೈಮ್ಸ್) : ಈ ತಿಂಗಳ 25 ರಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ನೇಮಿಸಿ ಬಿಜೆಪಿ ತಮಿಳುನಾಡು ರಾಜ್ಯ ಘಟಕಾಧ್ಯಕ್ಷ ಎಲ್ ಮುರುಗನ್ ಶನಿವಾರ ಆದೇಶಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯ ಮೂಲಕ ಮಾಹಿತಿ ನೀಡಿರುವ ಮುರುಗನ್ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅವರ ಮುಂದಿನ ಭವಿಷ್ಯ ಯಶಸ್ವಿಯಾಗಿರಲಿ ಎಂದು ಹಾರೈಸಿದ್ದಾರೆ.
ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ, ತಮ್ಮ ಕೆಲವೊಂದು ಕಾರ್ಯವೈಖರಿಯಿಂದ ಜನಮನ್ನಣೆ ಗಳಿಸಿದ್ದರು. 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸ್ವಂತ ಊರು ತಮಿಳುನಾಡಿಗೆ ತೆರಳಿ ಅವರು ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಆಗಸ್ಟ್ 25 ರಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರುಳೀಧರ್ ರಾವ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಅವರ ನೇತೃತ್ವದಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
0 comments:
Post a Comment