ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ಎಪಿಎಂಸಿ ಮಾಜಿ ಅಧ್ಯಕ್ಷ, ಬಿ ಸಿ ರೋಡಿನ ನ್ಯಾಯವಾದಿ, ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ಬರಿಮಾರು (58) ಅವರು ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
ವೃತ್ತಿಯಲ್ಲಿ ಬಿ ಸಿ ರೋಡಿನಲ್ಲಿ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಕಲ್ಲಡ್ಕ ಸಮೀಪದ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ಇವರು ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಜನಾನುರಾಗಿಯಾಗಿದ್ದರು.
ಕಳೆದ ಕೆಲ ದಿನಗಳಿಂದ ಅಸೌಖ್ಯದಿಂದ ಇದ್ದ ಇವರು ಶುಕ್ರವಾರ ರಾತ್ರಿ ಅನಾರೋಗ್ಯ ಉಲ್ಬಣಿಸಿ ಸ್ವಗೃಹದಲ್ಲಿ ನಿಧನರಾದರು. ಮೃತರು ತಂದೆ, ತಾಯಿ, ಸಹೋದರ, ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಸಂತಾಪ
ಅಶೋಕ್ ಬರಿಮಾರ್ ಅವರ ನಿಧನಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ, ತಾ ಪಂ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಇರಾ ಗ್ರಾ ಪಂ ನಿಕಟಪೂರ್ವಾಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಮೊದಲಾದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
0 comments:
Post a Comment