ಬೆಂಗಳೂರು (ಕರಾವಳಿ ಟೈಮ್ಸ್) : ಪ್ರವಾದಿ ನಿಂದನೆಯ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ತಾನೇ ಹಾಕಿರುವುದಾಗಿ ಡಿ.ಜೆ. ಹಳ್ಳಿ ಗಲಭೆಗೆ ಪ್ರಮುಖ ಕಾರಣನಾದ ಆರೋಪಿ ನವೀನ್ ಪೊಲೀಸರ ಮುಂದೆ ತಪೊಪ್ಪಿಕೊಂಡಿದ್ದಾನೆ. ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿ ನವೀನ್ ಎಂಬಾತನನ್ನು ಪೂರ್ವ ವಿಭಾಗದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ, ತಾನು ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿ ಕಮೆಂಟ್ ಜತೆಗೆ ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
7 ಗಂಟೆ ಸುಮಾರಿಗೆ ಪೋಸ್ಟ್ ಮಾಡಿ 8 ಗಂಟೆಗೆ ಅದನ್ನು ಡಿಲೀಟ್ ಮಾಡಿದ್ದೆ. ಆದರೆ, ಆ ಒಂದು ಪೋಸ್ಟ್ ನಿಂದಾಗಿ ಇಂತಹ ಘಟನೆಗಳು ನಡೆಯುತ್ತವೆ ಎಂದು ತಾನು ಊಹಿಸಿರಲಿಲ್ಲ ಎಂದು ನವೀನ್ ಪೊಲೀಸರಿಗೆ ತಿಳಿಸಿದ್ದಾನೆ. ಶಾಸಕ ಅಖಂಡ ಶ್ರೀನಿವಾಸ್ ಅವರ ಅಕ್ಕನ ಮಗನಾಗಿರುವ ಆರೋಪಿ ನವೀನ್ ಸಾಮಾಜಿಕ ಜಾಲ ತಾಣಗಳಲ್ಲಿ ಇಸ್ಲಾಂ ಧರ್ಮದ ಪ್ರವಾದಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟ ಹಿನ್ನಲೆಯಲ್ಲಿ ನಗರದಲ್ಲಿ ಗಲಭೆ-ಘರ್ಷಣೆ ಉಂಟಾಗಿ ಮೂವರ ಸಾವಿಗೂ ಕಾರಣವಾಗಿತ್ತು.
0 comments:
Post a Comment