ಬಂಟ್ವಾಳ (ಕರಾವಳಿ ಟೈಮ್ಸ್) : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕೋವಿಡ್-19 ನಿರ್ಮೂಲನ ಜಾಗೃತಿ ಅಭಿಯಾನದ ಅಂಗವಾಗಿ ಬಂಟ್ವಾಳ ತಾಲೂಕು ಎಐಟಿಯುಸಿ ಸಂಘಟನೆಯ ಸಹಯೋಗದೊಂದಿಗೆ ಸಂಘದ ಸದಸ್ಯರಾದ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮ ಆಗಸ್ಟ್ 11 ರಂದು ಬೆಳಿಗ್ಗೆ 10 ಗಂಟೆಗೆ ಬಂಟ್ವಾಳ ಬೈಪಾಸ್ ರಸ್ತೆಯಲ್ಲಿರುವ ಕಾಮ್ರೆಡ್ ಎ ಶಾಂತಾರಾಮ್ ಪೈ ಸ್ಮಾರಕ ಭವನದ ಸಭಾಂಗಣದಲ್ಲಿ ಸಾಂಕೇತಿಕವಾಗಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಮಂಗಳೂರು 1ನೇ ವಿಭಾಗದ ಕಾರ್ಮಿಕ ಅಧಿಕಾರಿ ವಿಲ್ಮಾ ತಾವ್ರೊ ಎಲಿಜಬೆತ್, ಬಂಟ್ವಾಳ ತಾಲೂಕು ಕಾರ್ಮಿಕ ನಿರೀಕ್ಷಕ ಮೆರ್ಲಿನ್ ಗ್ರೇಸಿಯಾ ಡಿ’ಸೋಜಾ, ಎಐಟಿಯುಸಿ ಸಂಘಟನೆಯ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ ಕರುಣಾಕರ್ ಮಾರಿಪಳ್ಳ, ಬಂಟ್ವಾಳ ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ದೇರಣ್ಣ ಪೂಜಾರಿ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ ಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment