ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಭಾನುವಾರ ರಾತ್ರಿ ಸ್ಬತಃ ಟ್ವೀಟ್ ಮಾಡಿರುವ ಸಿಎಂ ಅವರು "ನನ್ನ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದ್ದು, ರೋಗ ಲಕ್ಷಣಗಳು ಇಲ್ಲದಿದ್ದರೂ ಮುನ್ನಚ್ಚರಿಕೆ ದೃಷ್ಟಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸುವಂತೆ ಕೋರುತ್ತೇನೆ" ಎಂದು ಬರೆದುಕೊಂಡಿದ್ದಾರೆ.
ಈ ಮೂಲಕ ರಾಜಕೀಯ ನಾಯಕರುಗಳು ಸಾಲು ಸಾಲಾಗಿ ಪಾಸಿಟಿವ್ ವರದಿ ಪಡೆಯುತ್ತಿರುವ ಹಿನ್ನಲೆಯಲ್ಲಿ ಜನ ಕೂಡಾ ಜಾಗರೂಕರಾಗಬೇಕಾದ ಅಗತ್ಯವಿದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿದೆ.
0 comments:
Post a Comment