ಬ್ರಿಟಿಷರಿಗಿಂತಲೂ ದೊಡ್ಡ ಮಟ್ಟದ ದಬ್ಬಾಳಿಕೆ ದೇಶದಲ್ಲಿ ಪ್ರಸ್ತುತ ನಡೆಯುತ್ತಿದೆ : ರಾಮಣ್ಣ ವಿಟ್ಲ - Karavali Times ಬ್ರಿಟಿಷರಿಗಿಂತಲೂ ದೊಡ್ಡ ಮಟ್ಟದ ದಬ್ಬಾಳಿಕೆ ದೇಶದಲ್ಲಿ ಪ್ರಸ್ತುತ ನಡೆಯುತ್ತಿದೆ : ರಾಮಣ್ಣ ವಿಟ್ಲ - Karavali Times

728x90

25 August 2020

ಬ್ರಿಟಿಷರಿಗಿಂತಲೂ ದೊಡ್ಡ ಮಟ್ಟದ ದಬ್ಬಾಳಿಕೆ ದೇಶದಲ್ಲಿ ಪ್ರಸ್ತುತ ನಡೆಯುತ್ತಿದೆ : ರಾಮಣ್ಣ ವಿಟ್ಲ


ಬಂಟ್ವಾಳ (ಕರಾವಳಿ ಟೈಮ್ಸ್) : ಮೋದಿ ನೇತೃತ್ವದ ಕೇಂದ್ರ ಸರಕಾರದಿಂದ ಜನವಿರೋಧಿ ನೀತಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯುನಿಷ್ಟ್  ಪಕ್ಷ (ಸಿಪಿಐಎಂ) ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಬಿ ಸಿ ರೋಡು ಮಿನಿ ವಿಧಾನಸೌಧ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂ ಜಿಲ್ಲಾ ಮುಖಂಡ ರಾಮಣ್ಣ ವಿಟ್ಲ, ಕೇಂದ್ರ ಸರಕಾರದ  ಜನವಿರೋಧಿ ನೀತಿಯನ್ನು ವಿರೋಧಿಸಿ ಆ 24 ರಿಂದ 29 ರವರೆಗೆ ದೇಶವ್ಯಾಪಿ ಮುಷ್ಕರ ನಡೆಯುತ್ತಿದೆ. ಪ್ರಸ್ತುತ ದೇಶದಲ್ಲಿ ಬ್ರಿಟಿಷರಿಂದಲೂ ದೊಡ್ಡ ಮಟ್ಟದ ದಬ್ಬಾಳಿಕೆ ನಡೆಯುತ್ತಿದೆ. ಬಡವರು, ಕಾರ್ಮಿಕರ ಬದುಕು ಅತಂತ್ರವಾಗಿದೆ ಎಂದರು. ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಮಾತನಾಡಿ ಕೊರೋನಾ ನಡುವೆ ಜನರಿಗೆ ಭದ್ರತೆ ಮತ್ತು ಧೈರ್ಯ ತುಂಬುವಲ್ಲಿ ಸರಕಾರವು ಸಂಪೂರ್ಣವಾಗಿ ವಿಫಲವಾಗಿದೆ. ಕೊರೋನಾ ಸಂದರ್ಭದಲ್ಲಿ ತಮ್ಮ ಊರಿಗೆ ತೆರಳುತ್ತಿದ್ದ ಸಾವಿರಾರು ಕಾರ್ಮಿಕರು ಪ್ರಾಣ ಕಳೆದುಕೊಂಡರು. ಕೈಗಾರಿಕೆಗಳು ಬಂದ್ ಆಗಿದೆ. ನಿರುದ್ಯೋಗ, ಆಹಾರದ ಕೊರತೆ, ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸುವಂತಾಗಿದೆ. ಆದರೆ  ಕೇಂದ್ರ ಸರಕಾರವು ಈ ಬಗ್ಗೆ ಯಾವುದೇ ಚಿಂತೆಯಿಲ್ಲದಂತೆ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಸಾರ್ವಜನಿಕ ಆರೋಗ್ಯಕ್ಕೆ ಕೇಂದ್ರೀಯ ವೆಚ್ಚವನ್ನು ಕನಿಷ್ಟ ಜಿಡಿಪಿಯ ಶೇ 3ರಷ್ಟು ಹೆಚ್ಚಿಸಬೇಕು. ಅಗತ್ಯ ವಸ್ತುಗಳ  ಕಾಯ್ದೆಯನ್ನು ತೆಗೆದು ಹಾಕುವ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರಿವಾಜ್ಞೆಯನ್ನು ರದ್ದುಗೊಳಿಸಬೇಕು. ಈಗಿರುವ ಕಾರ್ಮಿಕ ಕಾನೂನುಗಳನ್ನು ರದ್ದು ಯಾ ತಿದ್ದುಪಡಿಗೊಳಿಸಿ ಅಮಾನತು ಮಾಡುವ ಎಲ್ಲಾ  ಪ್ರಸ್ತಾಪಗಳನ್ನು ಹಿಂದೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಇದೇ ವೇಳೆ ಆಗ್ರಹಿಸಿದರು. 

ಡಿವೈಎಫ್‍ಐ ಮುಖಂಡರಾದ ಇಕ್ಬಾಲ್ ಹಳೆಮನೆ, ಸುರೇಂದ್ರ ಕೋಟ್ಯಾನ್, ತುಳಸೀದಾಸ್  ವಿಟ್ಲ, ಸಿಐಟಿಯು ಮುಖಂಡರಾದ ಉದಯಕುಮಾರ್, ಲೋಲಾಕ್ಷಿ ಬಂಟ್ವಾಳ, ಲಿಯಾಕತ್ ಖಾನ್, ಬಿ ನಾರಾಯಣ, ದಿನೇಶ್ ಆಚಾರಿ, ನಾರಾಯಣ ಅಂಗ್ರಿ, ಗಣೇಶ್ ಪ್ರಭು, ಹಮೀದ್ ಕುಕ್ಕಾಜೆ, ವಿನಯ ನಡುಮೊಗರು, ಬೆನ್ನಿ ವೇಗಸ್ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. 






  • Blogger Comments
  • Facebook Comments

0 comments:

Post a Comment

Item Reviewed: ಬ್ರಿಟಿಷರಿಗಿಂತಲೂ ದೊಡ್ಡ ಮಟ್ಟದ ದಬ್ಬಾಳಿಕೆ ದೇಶದಲ್ಲಿ ಪ್ರಸ್ತುತ ನಡೆಯುತ್ತಿದೆ : ರಾಮಣ್ಣ ವಿಟ್ಲ Rating: 5 Reviewed By: karavali Times
Scroll to Top