ನವದೆಹಲಿ (ಕರಾವಳಿ ಟೈಮ್ಸ್) : ಸಿನಿಮಾ ಹಾಗೂ ಟಿವಿ ಕಾರ್ಯಕ್ರಮಗಳ ಚಿತ್ರೀಕರಣಕ್ಕಾಗಿ ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವ್ಡೇಕರ್ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದಾರೆ.
ಅಭಿನಯಿಸುವವರು ಹಾಗೂ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದು ಆರೋಗ್ಯ ಸಚಿವಾಲಯದ ಜೊತೆ ಸಮಾಲೋಚನೆ ನಡೆಸಿ ಅಭಿವೃದ್ದಿಪಡಿಸಲಾಗಿರುವ ಮಾರ್ಗಸೂಚಿಯಲ್ಲಿ ಸಚಿವರು ತಿಳಿಸಿದ್ದಾರೆ.
ಮಾರ್ಗಸೂಚಿ ಬಿಡುಗಡೆಯಿಂದ ಸಿನಿಮಾ, ಟಿವಿ ಧಾರವಾಹಿಗಳು ಪುನರಾರಂಭಗೊಳ್ಳುವುದರ ಜೊತೆಗೆ ಉದ್ಯೋಗವಕಾಶಗಳು ಸೃಷ್ಟಿಯಾಗುವ ಭರವಸೆ ಹೊಂದಲಾಗಿದೆ ಎಂದು ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. ಕೊರೋನಾ ಲಾಕ್‍ಡೌನ್ ಬಳಿಕ ದೇಶಾದ್ಯಂತ ಸಿನಿಮಾ, ಟಿವಿ ಧಾರವಾಹಿಗಳ ಚಿತ್ರೀಕರಣವನ್ನು ರದ್ದುಪಡಿಸಲಾಗಿತ್ತು.
0 comments:
Post a Comment