ಮಂಗಳೂರು (ಕರಾವಳಿ ಟೈಮ್ಸ್) : ಭಾರೀ ಭೂಕುಸಿತ, ರಸ್ತೆ ಬಿರುಕು ಹಾಗೂ ಬಿರುಸಿನ ಮಳೆ ಸುರಿಯುತ್ತಿರುವ ಹಿನ್ನಲೆ ಹಾಗೂ ಮರಗಳು ಧರೆಗುಳಿದಿರುವ ಪರಿಣಾಮ ಚಾರ್ಮಾಡಿ ಘಾಟ್‌ನಲ್ಲಿ (ಎನ್‌ಎಚ್ -73) ವಾಹನಗಳ ಸಂಚಾರವನ್ನು ಎರಡು ದಿನಗಳ ಕಾಲ ನಿಷೇಧಿಸಲಾಗಿದೆ.
ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳು ಚಾರ್ಮಾಡಿ ಮತ್ತು ಕೊಟ್ಟಿಗೆ ಹಾರ ಚೆಕ್ ಪೋಸ್ಟ್‌ಗಳನ್ನು ಮುಚ್ಚಲಾಗಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಯಿಸಿರುವ ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ. ಅವರು ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಡಿ ಘಾಟ್ ರಸ್ತೆಯಲ್ಲಿ ಅನೇಕ ಭೂಕುಸಿತ ಸಂಭವಿಸಿದೆ. ಭೂಕುಸಿತದ ಅವಶೇಷಗಳನ್ನು ತೆರವುಗೊಳಿಸಲು ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿದ್ದು ವಾಹನ ಸಂಚಾರಕ್ಕಾಗಿ ರಸ್ತೆಯನ್ನು ಮುಚ್ಚಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಮತ್ತಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ವಾಹನ ಸಂಚಾರವನ್ನು ಎರಡು ದಿನಗಳ ಕಾಲ ನಿಷೇಧಿಸಲಾಗಿದೆ ಎಂದು ಅವರು ಹೇಳಿದರು.
0 comments:
Post a Comment