ನವದೆಹಲಿ (ಕರಾವಳಿ ಟೈಮ್ಸ್) : ಕೋವಿಡ್-19 ವೈರಸ್ ಸಂಧಿಗ್ಧತೆಯ ಮಧ್ಯೆ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‍ಗಳಿಗಾಗಿ ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆ ನಡೆಸುತ್ತಿರುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ನಾಳೆ (ಆ 28) ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದೆ.
ಕೇಂದ್ರ ಸರಕಾರದ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಿ ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯ ಹಾಗೂ ಜಿಲ್ಲಾ ಕೇಂದ್ರಗಳಲ್ಲಿನ ಕೇಂದ್ರ ಸರಕಾರಿ ಮುಖ್ಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು, ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದನ್ನು ತೀವ್ರವಾಗಿ ವಿರೋಧಿಸುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಮಾನಸಿಕವಾಗಿ ಒತ್ತಡವನ್ನುಂಟುಮಾಡಿದೆ. ಅಸ್ಸಾಂ ಮತ್ತು ಬಿಹಾರದಂತಹ ತೀವ್ರ ಪ್ರವಾಹ ಪರಿಸ್ಥಿತಿ ಉಲ್ಬಣಿಸಿರುವ ರಾಜ್ಯಗಳ ವಿದ್ಯಾರ್ಥಿಗಳಿಗೆ ಮತ್ತಷ್ಟು ಅನಾನುಕೂಲತೆಯಾಗಿದೆ ಎಂದು ವೇಣುಗೋಪಾಲ್ ಹೇಳಿದ್ದಾರೆ.
0 comments:
Post a Comment