ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರ ಬಳಿಕ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.
ಕಳೆದ ನಾಲ್ಕು ದಿನಗಳಿಂದ ಜ್ವರ ಹಾಗೂ ಬೆನ್ನು ನೋವಿನಿಂದ ಬಳಲುತ್ತಿದ್ದ ಡಿಕೆಶಿ ಅವರು ಎರಡು ದಿನಗಳ ಹಿಂದೆ ಕೊವಿಡ್-19 ಟೆಸ್ಟ್ ಮಾಡಿಸಿದ್ದರು. ಇಂದು ವರದಿ ಬಂದಿದ್ದು, ಪಾಸಿಟಿವ್ ದೃಢಪಟ್ಟಿದೆ.
ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್ ಅವರು ಇಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಇತ್ತೀಚಿಗಷ್ಟೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದೀಗ ಡಿ ಕೆ ಶಿವಕುಮಾರ್ ಅವರಿಗೂ ಕೋವಿಡ್ ವೈರಸ್ ಬಾಧಿಸಿದೆ.
0 comments:
Post a Comment