ಬೆಂಗಳೂರು (ಕರಾವಳಿ ಟೈಮ್ಸ್) : ಕೊರೊನಾ ಸೋಂಕು ಹಾಗೂ ಲಾಕ್‍ಡೌನ್ ಕಾರಣದಿಂದ ಸ್ಥಗಿತಗೊಂಡಿದ್ದ ಶಿಕ್ಷಣ ಸಂಸ್ಥೆಗಳು ರಾಜ್ಯದಲ್ಲಿ ಅಕ್ಟೋಬರ್ 1 ರಿಂದ ಪುನರಾರಂಭಗೊಳ್ಳಲಿದೆ ಎಂದು ರಾಜ್ಯ ಉಪಮಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಆರಂಭದಲ್ಲಿ ಪದವಿ ಕಾಲೇಜು ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದವರು ತಿಳಿಸಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಸರಕಾರದಿಂದ ಅಧಿಕೃತ ಸುತ್ತೋಲೆ ಹೊರಬಂದಿಲ್ಲ.
ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಸ್ನಾತಕ, ಸ್ನಾತಕೋತ್ತರ ತರಗತಿಗಳು ಆರಂಭವಾಗಲಿದ್ದು. ಸೆ. 1 ರಿಂದ ಆನ್‍ಲೈನ್ ತರಗತಿ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಮಾಹಿತಿ ರವಾನಿಸಿದೆ ಎನ್ನಲಾಗಿದ್ದು, ಸರಕಾರದ ಅಧಿಕೃತ ಆದೇಶ ಮಾತ್ರ ಬಾಕಿಯಿದೆ. ಆದರೆ ಸದ್ಯಕ್ಕೆ ಶಾಲೆ ಹಾಗೂ ಪಿಯುಸಿ ತರಗತಿಗಳು ತೆರೆಯುವುದಿಲ್ಲ ಎಂದು ಹೇಳಲಾಗುತ್ತಿದೆ.
ಇತ್ತೀಚೆಗಷ್ಟೇ ಅಂತಿಮ ಸೆಮಿಸ್ಟರ್ ಹಾಗೂ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಸಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಎಲ್ಲಾ ರಾಜ್ಯಗಳಿಗೂ ನಿರ್ದೇಶನ ನೀಡಿದೆ. ಸೆಪ್ಟೆಂಬರ್ ಒಳಗಾಗಿ ಪರೀಕ್ಷೆಗಳನ್ನು ಮುಗಿಸಬೇಕೆಂದು ಸ್ಪಷ್ಟನೆ ನೀಡಿದೆ. ಹಾಗಾಗಿ ಕೇಂದ್ರ ಸರಕಾರದ ಮಾರ್ಗ ಸೂಚಿಗನುಸಾರವಾಗಿ
ಕಾಲೇಜು ತೆರೆಯಲು ನಿರ್ಧರಿಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷಾ ಶುಲ್ಕ ಪಾವತಿಗೆ ಆಗಸ್ಟ್ 28 ಕೊನೆ ದಿನಾಂಕ
ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಅಭ್ಯರ್ಥಿಗಳ ಪರೀಕ್ಷಾ ಶುಲ್ಕವನ್ನು ಪಾವತಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಆಗಸ್ಟ್ 28ರವರೆಗೆ ಅವಕಾಶ ನೀಡಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಸೆಪ್ಟೆಂಬರ್-2019ರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಅಭ್ಯರ್ಥಿಗಳ (ಸಿ.ಸಿ.ಇ.ಆರ್.ಆರ್., ಸಿ.ಸಿ.ಪಿ.ಆರ್., ಎನ್.ಎಸ್.ಆರ್. ಹಾಗೂ ಎನ್.ಎಸ್.ಪಿ.ಆರ್.) ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸಲು ದೂರವಾಣಿ ಮುಖಾಂತರ, ಜೊತೆಗೆ ಕೆಲವು ವಿದ್ಯಾರ್ಥಿಗಳು, ಪೆÇೀಷಕರು ಖುದ್ದಾಗಿ, ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಗೆ ಮನವಿ ಮಾಡಿದ್ದಾರೆ.
ಈ ಹಿನ್ನಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಅಭ್ಯರ್ಥಿಗಳು ಆಗಸ್ಟ್ 25 ರಿಂದ 28 ವರೆಗೆ ಪ್ರತಿ ಅಭ್ಯರ್ಥಿಗೆ 300/- ರೂಪಾಯಿ ದಂಡ ಶುಲ್ಕದೊಂದಿಗೆ ಪರೀಕ್ಷಾರ್ಥಿಗಳಿಂದ ಪರೀಕ್ಷಾ ಶುಲ್ಕ ಸ್ವೀಕರಿಸಿ, ಎನ್.ಇ.ಎಫ್.ಟಿ. ಚಲನ್ ಮೂಲಕ ಬ್ಯಾಂಕಿಗೆ ಪಾವತಿಸಲು ಆಗಸ್ಟ್ 28 ಕೊನೆಯ ದಿನಾಂಕವಾಗಿದೆ.
ಆಗಸ್ಟ್ 29 ಎನ್.ಇ.ಎಫ್.ಟಿ. ಚಲನ್ ಮೂಲಕ ಪರೀಕ್ಷಾ ಶುಲ್ಕವನ್ನು ಬ್ಯಾಂಕ್ ಗೆ ಪಾವತಿಸಲು ಬ್ಯಾಂಕಿನ ಮೂಲಕ ಚಲನ್ ಪ್ರತಿ ಮತ್ತು ಇತರೆ ದಾಖಲೆಗಳನ್ನು ಮಂಡಳಿಗೆ ತಲುಪಿಸಲು ಕೊನೆಯ ದಿನಾಂಕವಾಗಿರುತ್ತದೆ.
0 comments:
Post a Comment